Advertisement

ಬಾಲ್ಯವಿವಾಹ ದುಷ್ಪರಿಣಾಮ ಅರಿವಿರಲಿ

06:09 AM May 24, 2020 | Lakshmi GovindaRaj |

ಹಾಸನ: ಜಿಲ್ಲೆಯ ಎಲ್ಲ ಪ್ರೌಢ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳು, ಗುಡ್‌ ಟಚ್‌ ಹಾಗೂ ಬ್ಯಾಡ್‌ ಟಚ್‌ ಬಗ್ಗೆ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಸಂಬಂಧಿಸಿದ  ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಯಂತ್ರಣದ ಸಾಮಾನ್ಯ ಸಮಿತಿ ಸಭೆ ನಡೆಸಿ ಮಾತನಾಡಿದರು.

Advertisement

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದರ ಮಾಹಿತಿಯುಳ್ಳ  ಕರಪತ್ರಗಳನ್ನು ಸಿದಟಛಿಪಡಿಸಿ ಗ್ರಾಮ ಪಂಚಾಯಿತಿಗಳಿಗೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಲಗತ್ತಿಸಬೇಕು ಎಂದು ಹೇಳಿದ್ದಾರೆ. ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಬಾಲ್ಯ ವಿವಾಹ ಕುರಿತು ಸುಳಿವು ಸಿಕ್ಕರೆ ಶಿಶು ಅಭಿವೃದ್ಧಿ  ಜನಾಧಿ ಕಾರಿ ಗಳಿಗೆ ಹಾಗೂ  ಚೈಲ್ಡ್‌ಲೈನ್‌ಗೆ ತಿಳಿಸುವ ಸಂಬಂಧ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯ ಕರ್ತೆಯರಿಗೆ ಸಭೆ ನಡೆಸಿ ಮಾಹಿತಿ ನೀಡಬೇಕು.

ಸ್ತ್ರೀ ಶಕ್ತಿ ಸಂಘಗಳನ್ನು ಸೇರಿಸಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ನಡೆದಿರುವ ಬಾಲ್ಯ ವಿವಾಹದ ಅಂಕಿ  ಅಂಶಗಳನ್ನು ನಿರಂತರವಾಗಿ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದಟಛಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ  ಘಟಕದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಶಿವಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ  ಶ್ರೀಧರ್‌, ಜಿಲ್ಲಾ ನಿರೂಪಣಾಧಿಕಾರಿ ಎ.ಜೆ. ಮಲ್ಲೇಶ್‌, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾಂತರಾಜು, ಪ್ರಚೋದನಾ ಸಂಸ್ಥೆಯ ನಿರ್ದೇಶಕ ಪೌಲಸ್‌ ಹಾಗೂ ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು  ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next