Advertisement

ಜಾಗೃತರಾಗದಿದ್ದರೆ ಜುಲೈ-ಆಗಸ್ಟ್‌ನಲ್ಲಿ ಆಪತ್ತು: ಕ್ಯಾ. ಡಾ|ರಾಜೇಂದ್ರ

04:08 PM Jul 01, 2020 | Suhan S |

ಹುನಗುಂದ: ಕೋವಿಡ್ ವೈರಸ್‌ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಹಾಗೂ ಸುಮ್ಮನೆ ಹೊರಗಡೆ ಸಂಚರಿಸುವುದನ್ನು ನಿಲ್ಲಿಸದಿದ್ದರೆ ಜುಲೈ-ಆಗಸ್ಟ್‌ ತಿಂಗಳಲ್ಲಿ ಬಹು ದೊಡ್ಡ ಆಪತ್ತು ಎದುರಿಸುವ ಸಮಯ ಬರುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ಕಳವಳ ವ್ಯಕ್ತಪಡಿಸಿದರು.

Advertisement

ಪಟ್ಟಣದ ಬಸವ ಮಂಟಪದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್ಸ್‌ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ನಾಲ್ಕೈದು ವಾರಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಓಡಾಡುವುದು, ಗುಂಪಾಗಿ ನಿಲ್ಲುವುದರಿಂದ ಸಾಕಷ್ಟು ಪ್ರಕರಣಗಳು ಕಂಡು ಬರುತ್ತಿವೆ. ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸದಿದ್ದರೆ ಮೊತ್ತೂಮ್ಮೆ ಲಾಕ್‌ಡೌನ್‌ ಆಗುವ ಸಂಭವ ಉಂಟಾದರು ಅಚ್ಚರಿ ಪಡಬೇಕಿಲ್ಲ.

ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಲೆಕ್ಕಾ ಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮುಂಜಾಗ್ರತೆ ವಹಿಸಿದ್ದರಿಂದ ಬೇರೆ ಜಿಲ್ಲೆಗಳಿಗಿಂತ ನಮ್ಮ ಜಿಲ್ಲೆ ಕೋವಿಡ್ ಪ್ರಕರಣಗಳು ಕಡಿಮೆ. ಈ ಸಂದರ್ಭದಲ್ಲಿ ಮದುವೆ ಸಮಾರಂಭ ಮತ್ತು ಶವದ ಅಂತ್ಯ ಸಂಸ್ಕಾರದಲ್ಲಿ ಹೆಚ್ಚಿಗೆ ಜನ ಸೇರುವುದನ್ನು ನಿಲ್ಲಿಸಬೇಕು. ಮಾರುಕಟ್ಟೆ ಮತ್ತು ಅಂಗಡಿ-ಮುಂಗಟ್ಟುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಶಿಸ್ತಿನ ಕ್ರಮ ಜರುಗಿಸಬೇಕೆಂದು ತಿಳಿಸಿದರು.

ಈ ವೇಳೆ ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಎಂಎನ್‌ಸಿ ರಿಯಾಜ್‌ಆಚಾರ್‌, ತಹಶೀಲ್ದಾರ್‌ ಬಸವರಾಜ ನಾಗರಾಳ, ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ಸಿಪಿಐ ಅಯ್ಯನಗೌಡ ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next