Advertisement
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡೀಸಿ, ಮಾಲಿನ್ಯ ನಿಯಂತ್ರಣ ಮಂಡಳಿಯು ಸರಿಯಾಗಿ ಕಾರ್ಯನಿರ್ವಹಿಸಿದ್ದರೆ, ಇಷ್ಟು ಅವಾಂತರವೇ ಸೃಷ್ಟಿಯಾಗುತ್ತಿರಲಿಲ್ಲ. ಬೆಂ.ಗ್ರಾ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂಧಿಸಬೇಕಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಬೆಂಗಳೂರು ನಗರದಲ್ಲಿರುವುದೇ ಅವೈಜ್ಞಾನಿಕವಾಗಿದೆ. ತಕ್ಷಣ ದಿಂದಲೇ ಕಚೇರಿಯನ್ನು ದೇವನಹಳ್ಳಿಯಲ್ಲಿನ ಡೀಸಿ ಕಚೇರಿಗೆ ಸ್ಥಳಾಂತರ ಮಾಡಿಕೊಂಡು, ಜಿಲ್ಲೆಯಲ್ಲಿನ ಜನರ ಸಮಸ್ಯೆಗೆ ಸ್ಪಂಧಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
Related Articles
Advertisement
ಯುವ ಸಂಚಲನ ಅಧ್ಯಕ್ಷ ಚಿದಾನಂದ್, ಡೀಸಿಗೆ ಮನವಿ ಸಲ್ಲಿಸಿ, 2016ರಲ್ಲೇ ಒಳಚರಂಡಿ ನೀರು ಕೆರೆಗೆ ಸೇರದಂತೆ ಹಾಗೂ ಇತರೆ ಪರಿಹಾರಗಳ ಕುರಿತ ಸಮಗ್ರ ವರದಿಯನ್ನು ನಗರಸಭೆಗೆ ಸಲ್ಲಿಸಲಾಗಿದೆ. ಆದರೂ, ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.
ಒತ್ತುವರಿ ತೆರವುಗೊಳಿಸಿ: 175 ಎಕರೆ ವಿಸ್ತೀರ್ಣದ ನಾಗರಕೆರೆಯಲ್ಲಿ ಕೆಲವೆಡೆ ಕೆರೆ ಜಾಗ ಒತ್ತುವಾರಿ ಯಾಗಿದೆ. ಪರಿಶೀಲಿಸಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಗಳಿಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ, ಈಗಾಗಲೇ ಕೆರೆ ಸರ್ವೆ ಮಾಡಲಾಗಿದೆ. ಒತ್ತುವರಿಯಾ ಗಿರುವ ಕಡೆ ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಕ್ಷಿ ಪ್ರಭೇದಗಳ ಆವಾಸ ಸ್ಥಾನ: ನಾಗರಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ 100ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳಿವೆ. ನೂರಾರು ಜಾತಿಯ ವಲಸೆ ಪಕ್ಷಿಗಳು ಆಗ ಮಿಸುತ್ತವೆ. ಇಂತಹ ಜೀವವೈವಿದ್ಯ ತಾಣವಾದ ನಾಗರ ಕೆರೆಯನ್ನು ಸಂರಕ್ಷಿಸಬೇಕು ಎಂದು ಯುವ ಸಂಚಲನ ಅಧ್ಯಕ್ಷ ಚಿದಾನಂದ್ ಡೀಸಿ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಡೀಸಿ, ತ್ವರಿತಗತಿಯಲ್ಲಿ ಕೆರೆ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು. ಯೋಜನಾ ವರದಿ ಸಿದ್ಧ ಪಡಿಸುವಾಗ ತಜ್ಞರ ಅಭಿಪ್ರಾಯ, ಸಲಹೆ ಸೂಚನೆ ಸ್ವೀಕರಿಸಬೇಕು ಎಂದು ನಗರಸಭೆ ಆಯುಕ್ತರಿಗೆ ಸೂಚಿಸಿದರು.
ಐಐಎಸ್ಸಿಗೆ ನೀರಿನ ಮಾದರಿ: ಬಾಶೆಟ್ಟಿಹಳ್ಳಿ ಸೇರಿದಂತೆ ಕಲುಷಿತಗೊಂಡಿರುವ ಕೆರೆ ವ್ಯಾಪ್ತಿ ಗ್ರಾಮದಳ ಶುದ್ಧ ನೀರಿನ ಘಟಕಗಳಿಂದ ಸ್ಯಾಂಪಲ್‌ಗಳನ್ನು ಐಐಎಸ್ಸಿಗೆ ರವಾನಿಸಲು ಸೂಚಿಸಿದ್ದೇನೆ. ಮನುಷ್ಯನಿಗೆ ಬದುಕಲು ಬೇಕಾದ ನೀರಿನ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು. ಐಐಎಸ್ಸಿಯಲ್ಲಿ ಹಲವು ಮಾನ ದಂಡಗಳಲ್ಲಿ ನೀರಿನ ಪರೀಕ್ಷೆ ನಡೆವುದರಿಂದ ನಿಖರ ಫಲಿತಾಂಶ ಸಿಗಲಿದೆ. ವರದಿ ಪಡೆದ ನಂತರ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ತಹಶೀಲ್ದಾರ್ ಮೋಹನಕುಮಾರಿ, ತಾಪಂ ಇಒ ಶ್ರೀನಾಥ್ ಗೌಡ, ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್, ಬಾಶೆಟ್ಟಿಹಳ್ಳಿ ಪಪಂ ಮುಖ್ಯಾಧಿಕಾರಿ ಮುನಿರಾಜು ಸೇರಿದಂತೆ ಲೋಕೋಪಯೋಗಿ, ನಗರ ಸಭೆ, ಸಣ್ಣ ನೀರಾವರಿ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಇದ್ದರು.
ಕಲುಷಿತ ನೀರು ಸಂಸ್ಕರಿಸದಿದ್ದರೆ ಕ್ರಮ ಕೈಗೊಳ್ಳಿ: ಬಣ್ಣ ಹಾಗೂ ರಸಾಯನಿಕ ಕೈಗಾರಿಕೆಗಳು ಹೊರ ಬಿಡುತ್ತಿರುವ ವಿಷಯುಕ್ತ ನೀರಿನಿಂದ ಕೆರೆಗಳು ಸಂಪೂರ್ಣ ಮಲಿನಗೊಂಡಿವೆ. ಕೈಗಾರಿಕೆಗಳು ಮೂಲದಲ್ಲಿಯೇ ತ್ಯಾಜ್ಯ ನೀರು ಸಂಸ್ಕರಿಸಿ ಕೆರೆಗೆ ಬಿಡಬೇಕು. ಉದಾಸೀನ ಮಾಡಿ ಜಲಮೂಲ ಹಾಳು ಮಾಡುವ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಾಶೆಟ್ಟಿಹಳ್ಳಿಯಲ್ಲಿ 312 ಕೈಗಾರಿಕೆಗಳಿವೆ. ಕೆಐಎಡಿಬಿ ಬಳಿ ಜಮೀನು ಇದ್ದರೆ 3-4 ಎಕರೆ ಪ್ರದೇಶದಲ್ಲಿ ಪ್ರತ್ಯೇಕ ಟ್ರೀಟ್ ಮೆಂಟ್ ಪ್ಲಾಂಟ್ ಮಾಡಬಹುದು. ಈ ಬಗ್ಗೆ ಗಮನ ಹರಿಸಿ ಎಂದು ತಹಶೀಲ್ದಾರ್ ಮೋಹನಕುಮಾರಿ ಅವರಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು