Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇವು ದಾಸ್ತಾನು
ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಕಿಟ್‌ಗಳನ್ನು ರೈತರಿಗೆ ವಿತರಿಸುವುದರೊಂದಿಗೆ ಮೇವು ಬೆಳೆಯಲು ಪ್ರೋತ್ಸಾಹಿಸಬೇಕು. ಸಾಧ್ಯವಾದಲ್ಲಿ ನರೇಗಾಡದಡಿ ಮೇವು ಬೆಳೆಯಲು ಮುಂದಾಗಬೇಕು ಎಂದರು.
Related Articles
Advertisement
ವಿವೇಕ ಯೋಜನೆಯಡಿ ಹೊಸದಾಗಿ 200 ಶಾಲಾ ತರಗತಿಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಅವುಗಳಲ್ಲಿ 160 ಪೂರ್ಣಗೊಂಡಿದ್ದು, ಬಾಕಿ ಉಳಿದ 40 ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಇವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವಂತೆ ಕ್ರಮಕೈಗೊಳ್ಳಬೇಕು ಅಧಿಕಾರಿಗೆ ನಿರ್ದೇಶಿಸಿದರು.
ಮೀನುಗಾರಿಕೆ ವೇಳೆ ಮರಣ ಹೊಂದಿದ ಸಂದರ್ಭದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ಮೀನುಗಾರರ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದ ಮೀನುಗಾರರಿಗೆ ವಿಮೆಯ ಪ್ರೀಮಿಯಂ ಮೊತ್ತವನ್ನು ಸರಕಾರ ತುಂಬುತ್ತಿದೆ. 5 ಲಕ್ಷ ರೂ. ವರೆಗೆ ಪರಿಹಾರ ಒದಗಿಸಲಾಗುವುದು. ಕಳೆದ ಹಲವು ದಿನಗಳ ಹಿಂದೆ ಗಂಗೊಳ್ಳಿಯ ಬಂದರಿನಲ್ಲಿ ಬೆಂಕಿ ಅಪಘಾತದಿಂದ ಸುಟ್ಟು ಹೋದ ಬೋಟ್ ಮಾಲಕರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಡಿತರ ಚೀಟಿಯಲ್ಲಿ ಸಣ್ಣ ಪುಟ್ಟ ತಪ್ಪುಗಳಿಂದಾಗಿ ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ. ಸರಕಾರ ತಿದ್ದುಪಡಿಗೆ ಕಾಲಾವಕಾಶ ನೀಡಿದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ಆಹಾರ ಇಲಾಖೆಯವರು ಮಾಡಬೇಕು ಎಂದರು.ಗ್ಯಾರಂಟಿ ಯೋಜನೆಯ ಸರ್ವೇ ಕಾರ್ಯವನ್ನು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬಂದಿ, ಅಂಗನವಾಡಿ ಕಾರ್ಯಕರ್ತೆಯರು ಕೈಗೊಳ್ಳುತ್ತಿದ್ದು, ಸರ್ವೇಕಾರ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರತೀಕ್ ಬಯಾಲ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.