Advertisement

ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಿ

03:14 PM Sep 15, 2017 | Team Udayavani |

ಹೊಸಪೇಟೆ: ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ
ಎಸ್‌.ಭೀಮಾನಾಯ್ಕ ಅಧ್ಯಕ್ಷತೆಯಲ್ಲಿ ಸಾಂಕ್ರಾಮಿಕ ರೋಗಗಳ ಹತೋಟಿ ಕುರಿತು ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಲಾಯಿತು.

Advertisement

ಹಗರಿಬೊಮ್ಮನಹಳ್ಳಿ ಕ್ಷೇತ್ರದ 4 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಲಕನಹಟ್ಟಿ, ಡಣಾಯಕನಕೆರೆ, ಜಿ.ನಾಗಲಾಪುರ ಹಾಗೂ ಡಾಣಾಪುರ ಗ್ರಾಮ ಪಂಚಾಯ್ತಿ ವ್ಯಾಪಿಯ ಗ್ರಾಮಗಳಲ್ಲಿ ಡೆಂಘೀ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗ-ರುಜಿನಗಳು ಹರುಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಲ್ಲಾ ಗ್ರಾಮಗಳಲ್ಲಿ ಚರಂಡಿಗಳಲ್ಲಿ ಹೊಳು ತೆಗೆಯುವ ಮೂಲಕ ಹೊರ ಸಾಗಿಸುವುದು. ವೈದ್ಯಾಧಿಕಾರಿಗಳ ಸಲಹೆ
ಪಡೆದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು. ಸೊಳ್ಳೆ ನಿಯಂತ್ರಣಕ್ಕಾಗಿ ಚರಂಡಿಗಳಿಗೆ ಬೀಚಿಂಗ್‌ ಪೌಡರ್‌ ಸಿಂಪಡಿಕೆ ಸೇರಿದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೂಡಲೇ ಕೈಗೊಳ್ಳುವುದು. ಕುಡಿಯುವ ನೀರಿನ ಟ್ಯಾಂಕ್‌ ಗಳನ್ನು 15 ದಿನಗಳೊಮ್ಮ ಸ್ವತ್ಛತೆ ಮಾಡಿ ಬೀಚಿಂಗ್‌ ಪೌಡರ್‌ ಸಿಂಪಡಿಸುವುದು ಸೇರಿದಂತೆ ಇತರೆ ಮುಂಜಾಗ್ರತ
ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಪಂ ಇಒ ವಾರದಲ್ಲಿ ಎರಡು ಬಾರಿಯಾದರೂ ತಮ್ಮ ಕ್ಷೇತ್ರ ವ್ಯಾಪ್ತಿಗೆ 4 ಗ್ರಾಮ ಪಂಚಾಯತಿಗೆ ಭೇಟಿ ನೀಡಿಬೇಕು.
ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಣ ಹಾಗೂ ನಿರ್ಮಿಸಿಕೊಂಡ ಫ‌ಲಾನುಭವಿಗಳಿಗೆ ಸಹಾಯಧನ ಪಾವತಿ ಮಾಡುವ ಮೂಲಕ 2 ಮುಂದಿನ ಅಕ್ಟೋಬರ್‌ 2.ರೊಳಗೆ ಗ್ರಾಮ ಪಂಚಾಯತಿಯನ್ನು ಬಯಲು ಬಹಿರ್ದೆಸಿ ಮುಕ್ತ ಮಾಡಲು ಅಧಿಕಾರಿಗಳು ಶ್ರಮ ವಹಿಸಬೇಕು ಸೂಚಿಸಿದರು. ತಾಪಂ ಇಒ ಟಿ.ವೆಂಕೊಬಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪಿಡಿಒಗಳು ಕೇಂದ್ರ ಸ್ಥಾನದಿಂದ ದೂರ ಉಳಿಯುತ್ತಿದ್ದಾರೆ ಎಂಬ ದೂರುಗಳು ಗ್ರಾಮಸ್ಥರಿಂದ ವ್ಯಾಪಕವಾಗಿ ಕೇಳಿ
ಬರುತ್ತಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ವಾಸವಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು. ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವವರಿಗೆ ಮಾತ್ರ ಅವಕಾಶವಿದ್ದು, ನಿರ್ಲಕ್ಷ್ಯಧೋರಣೆ ಅನುಸರಿಸುವ ಅಧಿಕಾರಿಗಳು ಬೇರೆಡೆ ಹೋಗಬಹುದು.
ಎಸ್‌.ಭೀಮಾನಾಯ್ಕ,
ಹಗರಿಬೊಮ್ಮಹಳ್ಳಿ ಶಾಸಕ.

Advertisement
Advertisement

Udayavani is now on Telegram. Click here to join our channel and stay updated with the latest news.

Next