ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರಕಾರಾಗೃಹಕ್ಕೆ ಭೇಟಿ ನೀಡಿ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳು ಕುರಿತು ಪರಿಶೀಲನೆ ನಡೆಸಿದರು.
ಸೋಂಕು ಹರಡುವುದನ್ನು ತಡೆಯಲು ಅಗತ್ಯಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾರಾಗೃಹಕ್ಕೆ ಭೇಟಿ ನೀಡಿದ ತಕ್ಷಣವೇ ಸಚಿವರು ಕಾರಾಗೃಹದ ಆಸ್ಪತ್ರೆಗೆ ಭೇಟಿ ನೀಡಿದರು.
100 ಹಾಸಿಗೆಯಆಸ್ಪತ್ರೆಯಲ್ಲಿನ ವೈದ್ಯಕೀಯ ವ್ಯವಸ್ಥೆಗಳನ್ನು ಅವಲೋಕಿಸಿದರು. ಕಾರಾಗೃಹದ ವೈದ್ಯಾಧಿಕಾರಿಗಳಿಂದ ಅಲ್ಲಿನ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಗಳ ಕುರಿತು ಮಾಹಿತಿ ಪಡೆದರು. ಸೋಂಕು ಕಾರಾಗೃಹದಲ್ಲಿನ ಇತರ ಕೈದಿಗಳಿಗೆ ಹರಡದಂತೆ ಕಟ್ಟೆಚ್ಚರವಹಿಸುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ನಂತರ ಕಾರಾಗೃಹದಲ್ಲಿನ ಬಾನುಲಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಕೈದಿಗಳನ್ನುದ್ದೇಶಿಸಿ ಮಾತನಾಡಿದರು.ಕೋವಿಡ್ ಎರಡನೆಯ ಅಲೆಯ ವಿರುದ್ಧ ನಮ್ಮ ಹೋರಾಟಸಾಗುತ್ತಿದೆ. ಈ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಿಎಂದು ಅವರು ಕೈದಿಗಳಿಗೆ ಮನವಿ ಮಾಡಿದರು. ಕಾರಾಗೃಹಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್‌ಅವರು ಉಪಸ್ಥಿತರಿದ್ದರು.
ಕೋವಿಡ್ ವಿರುದ್ಧಹೋರಾಟಕ್ಕೆ 5 ಕೋಟಿರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕೋವಿಡ್ ಹೋರಾಟಕ್ಕೆಬೇಕಾದ ಅಗತ್ಯ ವೈದ್ಯಕೀಯ ಉಪಕರಣ ಮತ್ತು ಸೋಂಕುನಿವಾರಕ ಔಷಧೋಪಚಾರ ಗಳಿಗಾಗಿ 5 ಕೋಟಿ ರೂ.ವೆಚದಲ್ಲಿ ಯೋಜನೆ ಸಿದ್ದಪಡಿಸಲಾಗುತ್ತಿದೆ. 2 ಕೋಟಿ ರೂ.ಮೊತ್ತದ ಯೋಜನೆಯನ್ನು 5 ಕೋಟಿಗೆ ಹೆಚ್ಚಿಸಲಾಗಿದೆ.ಎಸ್‌ಡಿಆರ್‌ಎಫ್ ನಿಧಿ ಅಡಿ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆಸಲ್ಲಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.