Advertisement

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ನಿಭಾಯಿಸುವಾಗ ಇರಲಿ ಎಚ್ಚರ

11:44 AM Mar 12, 2017 | Team Udayavani |

ಬೆಂಗಳೂರು: ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಎಂದು ಹೇಳಿರುವ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಮದನ್‌ ಬಿ.ಲೋಕೂರ್‌, ಇಂತಹ ಪ್ರಕರಣಗಳನ್ನು ನಿಭಾಯಿಸುವಾಗ ನ್ಯಾಯಾಧೀಶರು ಮತ್ತು ನ್ಯಾಯಮೂರ್ತಿಗಳು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ.

Advertisement

ವಿಕಾಸಸೌಧದಲ್ಲಿ ಶನಿವಾರ ಪೋಕೊÕà ಕಾಯ್ದೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ನ್ಯಾಯಮೂರ್ತಿಗಳಿಗೆ ಏರ್ಪಡಿಸಿದ್ದ ವೃತ್ತಿಪರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಮಕ್ಕಳ ಮೇಲೆ 94 ಸಾವಿರ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

ಈ ರೀತಿಯ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಅದರಲ್ಲೂ ದಕ್ಷಿಣ ಭಾರತಕ್ಕೆ ಹೋಲಿಸಿದರೆ ಉತ್ತರ ಭಾರತದಲ್ಲಿ ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ ನಡೆಯುತ್ತಿದೆ. ಇದನ್ನು ತಡೆಗಟ್ಟುವುದು ಬಹುದೊಡ್ಡ ಸವಾಲಾಗಿದ್ದು, ಎದುರಿಸಲು ಇಡೀ ಸಮಾಜ ಒಟ್ಟಾಗಿ ಸಿದ್ಧವಾಗಬೇಕೆಂದು ತಿಳಿಸಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ದಿಟ್ಟ ಮತ್ತು ಸಮರೋಪಾದಿಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಕೋಲ್ಕತಾ ಮತ್ತು ಆಂಧ್ರಪ್ರದೇಶಗಳಲ್ಲಿ ಇಂತಹ ಪ್ರಕ ರ­ಣಗಳ ವಿಚಾರಣೆಗಾಗಿಯೇ ಪ್ರತ್ಯೇಕ ನ್ಯಾಯಾ ಲಯಗಳಿವೆ. ಸಂತ್ರಸ್ತ ಮಕ್ಕಳಿಗೆ ಕಿಂಡರ್‌ ಗಾರ್ಡನ್‌ ಸೇರಿ ಹಲವು ಸೌಲಭ್ಯ ಒದಗಿಸಲಾಗಿದೆ. ಈ ರೀತಿಯ ಸೌಲಭ್ಯಗಳನ್ನು ಒದಗಿಸಲು ಇತರೆ ರಾಜ್ಯಗಳೂ ಗಮನಹರಿಸಬೇಕು ಎಂದು ಹೇಳಿದರು.

ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇತರೆ ಪ್ರಕರಣಗಳಂತೆ ಅವುಗಳನ್ನು ನಿಭಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಪೋಕೊ ಕಾಯ್ದೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ವಯ ಈ ಪ್ರಕರಣಗಳನ್ನು ನಿಭಾಯಿಸುವಾಗ ಮಕ್ಕಳ ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಗೌರವ ಮತ್ತು ಹಕ್ಕುಗಳಿಗೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಬೇಕೆಂದು ನ್ಯಾಯಮೂರ್ತಿಗಳಿಗೆ ಕಿವಿಮಾತು ಹೇಳಿದರು.

Advertisement

ಕರ್ನಾಟಕದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸೂಕ್ತವಾಗಿ ನಿಭಾಯಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಇಲ್ಲಿ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ಉತ್ತಮ ಕೌನ್ಸೆಲಿಂಗ್‌ ವ್ಯವಸ್ಥೆಯಿದೆ ಎಂದರು. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ, ನ್ಯಾ.ಅಶೋಕ್‌ ಹಿಂಚಿಗೇರಿ, ಮಕ್ಕಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ, ಉಮಾದೇವಿ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next