Advertisement

ಅನ್‌ಲಾಕ್‌ ಘೋಷಣೆ ಮುನ್ನ ಎಚ್ಚರವಿರಲಿ : ರಾಜ್ಯಗಳಿಗೆ ಕೇಂದ್ರ ಸರಕಾರ ಪತ್ರ

02:34 AM Jun 20, 2021 | Team Udayavani |

ಹೊಸದಿಲ್ಲಿ: ದೇಶದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅನ್‌ಲಾಕ್‌ ಕ್ರಮ ಕೈಗೊಳ್ಳುವುದಕ್ಕೆ ಪೂರಕವಾಗಿ “ಹೆಚ್ಚಿನ ಮುನ್ನೆಚ್ಚರಿಕೆ’ ವಹಿಸಿ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ಸೂಚಿಸಿ­ದ್ದಾರೆ. ಈ ಬಗ್ಗೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಈ ಅಂಶ ಪ್ರಸ್ತಾವಿಸಿದ್ದಾರೆ. ಕೊರೊನಾ ನಿಯಂತ್ರಣ ಕ್ರಮಗಳು, ಪರೀಕ್ಷೆ, ನಿಗಾ, ಚಿಕಿತ್ಸೆ, ಲಸಿಕೆ ನೀಡುವಿಕೆ- ಈ ಐದು ಅಂಶಗಳ ಬಗ್ಗೆ ಗಮನಹರಿಸ ಬೇಕು ಎಂದು ಸಲಹೆ ಮಾಡಿದ್ದಾರೆ. ರಾಜ್ಯಗಳಲ್ಲಿ ಲಸಿಕೆ ಹಾಕಿಸುವ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಇರುವ ಪ್ರದೇಶಗಳಲ್ಲಿ ಲಾಕ್‌ಡೌನ್‌ ಮಾಡಬೇಕು. ಕೊರೊನಾ ಸೋಂಕು ಪ್ರಮಾಣ ಇಳಿಕೆಯಾಗಿರುವ ಸ್ಥಳಗಳಲ್ಲಿ ನಿಯಮ ಸಡಿಲಿಕೆ ಮಾಡುವಂತೆಯೂ ಭಲ್ಲಾ ಸಲಹೆ ಮಾಡಿದ್ದಾರೆ.

Advertisement

ಎಫ್ಐಆರ್‌ಗೆ ಸೂಚನೆ: ಕರ್ತವ್ಯ ನಿರತ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯನ್ವಯ ಎಫ್ಐಆರ್‌ ದಾಖಲಿಸುವಂತೆ ಕೇಂದ್ರ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

ಲಾಕ್‌ಡೌನ್‌ ವಾಪಸ್‌: ತೆಲಂಗಾಣದಲ್ಲಿ ರವಿವಾರ (ಜೂ.20)ದಿಂದ ಅನ್ವಯವಾಗುವಂತೆ ಎಲ್ಲ ರೀತಿಯ ಪ್ರತಿಬಂಧಕ ಕ್ರಮ, ನಿಯಮಗಳನ್ನು ರದ್ದುಗೊಳಿಸ ಲಾಗಿದೆ. ಜು.1ರಿಂದ ಶಿಕ್ಷಣ ಸಂಸ್ಥೆಗಳು ಕಾರ್ಯಾರಂಭ ಮಾಡಲಿವೆ.
ಇದೇ ವೇಳೆ, ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ 60,753 ಹೊಸ ಸೋಂಕು ಪ್ರಕರಣಗಳು ಮತ್ತು ಇದೇ ಅವಧಿಯಲ್ಲಿ 1,647 ಮಂದಿ ಅಸುನೀಗಿದ್ದಾರೆ.

6-8 ವಾರಗಳಲ್ಲಿ 3ನೇ ಅಲೆ
“ಸರಿಯಾದ ರೀತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮ ಪಾಲಿಸದೇ ಇದ್ದರೆ, 6-8 ವಾರಗಳಲ್ಲಿ ಮೂರನೇ ಅಲೆ ಅಪ್ಪಳಿಸಲಿದೆ’ ಹೀಗೆಂದು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ| ರಣದೀಪ್‌ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ಸದ್ಯ ಸೋಂಕು ಸಂಖ್ಯೆ ಕಡಿಮೆಯಾ ಗಿದ್ದರೂ, ಹೆಚ್ಚಿನ ಪ್ರಮಾಣದಲ್ಲಿ ಜನರು ಗುಂಪು ಸೇರುವುದನ್ನು ತಡೆಯಲೇಬೇಕು. ಇದರ ಜತೆಗೆ ಹೆಚ್ಚಿನ ಸಂಖ್ಯೆಯ ಜನರಿಗೆ ಲಸಿಕೆ ಹಾಕುವುದಕ್ಕೆ ಕ್ರಮಗಳನ್ನೂ ಕೈಗೊಳ್ಳಬೇಕು ಎಂದಿದ್ದಾರೆ. 3ನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ಬಗ್ಗೆ ಉತ್ತರಿಸಿದ ಅವರು “ಇದುವರೆಗೆ ಇಂಥ ವಾದಕ್ಕೆ ಪುಷ್ಟಿ ಸಿಕ್ಕಿಲ್ಲ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next