ಧಾರವಾಡ: ಬೇಸಿಗೆ ಆರಂಭ ಆಗುತ್ತಿರುವುದರಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಅಭಾವ ಆಗದಂತೆಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ ಸುರಪುರ ಹೇಳಿದರು.
ನಗರದ ಜಿಪಂ ಸಭಾಂಗಣದಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ನೀರಿನ ಅಭಾವ ಆಗಲಿರುವಸಂಭವನೀಯ ಗ್ರಾಮಗಳ ಪಟ್ಟಿ ಮಾಡಿ,ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ನಗರಾಭಿವೃದ್ಧಿ ಯೋಜನೆಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ರೈತರಿಗೆ ಇನ್‌ಪುಟ್ ಸಬ್ಸಿಡಿ, ಬೆಳೆವಿಮಾ ಸೌಲಭ್ಯ, ಮನೆ ಹಾನಿಯಾದವರಿಗೆ ಸಹಾಯಧನ ತಲುಪುವಂತೆ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳಿಂದಜಿಲ್ಲೆಯ ರಸ್ತೆ, ಕುಡಿಯುವ ನೀರು, ಭೂತಸೌಕರ್ಯಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆಪ್ರಸಕ್ತ ಸಾಲಿಗೆ ಹಂಚಿಕೆ ಮತ್ತು ಬಿಡುಗಡೆಆಗಿರುವ ಅನುದಾನವನ್ನು ಸಮರ್ಪಕವಾಗಿಬಳಸಿಕೊಂಡು ನಿಗದಿತ ಅಭಿವೃದ್ಧಿ ಸಾಧಿ ಸಬೇಕೆಂದು ಸೂಚನೆ ನೀಡಿದರು.
ಡಿಸಿ ನಿತೇಶ ಪಾಟೀಲ ಮಾತನಾಡಿ, ಸರಕಾರದ ಎಲ್ಲ ಕಾರ್ಯಕ್ರಮಗಳನ್ನುಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆತರಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ವಹಣೆ, ಆಯುಷ್ಮಾನಭಾರತ ಆರೋಗ್ಯ ಕರ್ನಾಟಕ ಯೋಜನೆಉತ್ತಮವಾಗಿದೆ. ಹಲವಾರು ಗ್ರಾಮಗಳಲ್ಲಿಸರಕಾರಿ ಜಮೀನು ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗಿದೆ. ಬೇಡಿಕೆ ಇರುವ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉಳಿದಜನರಿಗೆ ಅಗತ್ಯವಿರುವ ಸ್ಮಶಾನ ಭೂಮಿ ಕಲ್ಪಿಸಲು ಕ್ರಮ ವಹಿಸಲಾಗಿದೆ ಎಂದರು.
ಸಂಸತ್ ಸದಸ್ಯರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳ ಪ್ರಗತಿಯಾಗಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಡಿಸಿ ಪಿಡಿ ಖಾತೆಯಲ್ಲಿಅನುದಾನ ಲಭ್ಯವಿದ್ದು, ತುರ್ತು ಮತ್ತುಅಗತ್ಯ ಕಾಮಗಾರಿ ಕೈಗೊಳ್ಳುವ ಬೇಡಿಕೆ ಇದ್ದರೆತಾಲೂಕಾವಾರು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಪಂಉಪ ಕಾರ್ಯದರ್ಶಿ ಎಸ್.ಎಮ್. ಕುಂದೂರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಯಶವಂತಮದೀನಕರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರು, ತಾಪಂ ಇಒಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.