Advertisement

ಕೋವಿಡ್‌ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

06:56 PM Oct 25, 2020 | Suhan S |

ದಾವಣಗೆರೆ: ಪ್ರಸಕ್ತ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳಿವೆ. ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವಭರದಲ್ಲಿ ಸಾರ್ವಜನಿಕರು ಕೋವಿಡ್‌ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

Advertisement

ದಸರಾ, ದೀಪಾವಳಿ, ಈದ್‌ ಮಿಲಾದ್‌ ಸೇರಿದಂತೆ ವಿವಿಧ ಹಬ್ಬಗಳ ಆಚರಣೆ ಸಂದರ್ಭದಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ಕೋವಿಡ್‌ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಎಲ್ಲರೂ  ಈ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಿ ರೋಗಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ದಸರಾ ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು. 100ಕ್ಕಿಂತ ಹೆಚ್ಚು ಜನರು ಒಮ್ಮೇಲೆ ಸೇರುವಂತಿಲ್ಲ. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದ್ದು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಹಬ್ಬಗಳು ಪೂರಕವಾಗಬೇಕು. ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆ ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಪಟಾಕಿ ಮಾರಾಟ ಮಾಡಬೇಕು. ಪಟಾಕಿ ಮಾರಾಟದ ಮಳಿಗೆಗಳನ್ನು ನ. 1 ರಿಂದ 17ವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಬೇರೆ ಸ್ಥಳದಲ್ಲಿಮತ್ತು ದಿನಾಂಕಗಳಲ್ಲಿ ಅಂಗಡಿಯನ್ನುತೆರೆಯಬಾರದು. ಸಾರ್ವಜನಿಕ ವಸತಿಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳು ಅನುಮತಿ ನೀಡಬೇಕು. ಕೋವಿಡ್‌-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಕಾರ್ಪೋರೇಷನ್‌ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ತಪ್ಪಿದರವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next