Advertisement

ಬರ ಮುಕ್ತ ಜಿಲ್ಲೆ ಮಾಡಲು ಬದ್ಧತೆ ತೋರಿ

10:46 AM Mar 18, 2019 | Team Udayavani |

ಧಾರವಾಡ: ಜಿಲ್ಲೆಯನ್ನು ಬರಗಾಲ ಮುಕ್ತಗೊಳಿಸಲು ಗ್ರಾಮ ಮಟ್ಟದಲ್ಲಿರುವ ಎಲ್ಲ ಅಧಿ ಕಾರಿಗಳು ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು.

Advertisement

ತಾಪಂ ಕಾರ್ಯಾಲಯದಲ್ಲಿ ಮತದಾನ ಜಾಗೃತಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಬರ ನಿರ್ವಹಣೆ ಕುರಿತು ಜರುಗಿದ ತಾಲೂಕಿನ ಪಿಡಿಒಗಳು, ಕಂದಾಯ ನಿರೀಕ್ಷಕರು, ಗ್ರಾಪಂ ಕಾರ್ಯದರ್ಶಿಗಳು ಮತ್ತು ಗ್ರಾಮಲೇಖಾ 
ಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜನರಿಗೆ ಸ್ಥಳೀಯವಾಗಿ ಉದ್ಯೋಗ ಮಾಡಲು ಉದ್ಯೋಗ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕು. ಧಾರವಾಡ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪ್ರತಿ ಗ್ರಾಮಮಟ್ಟದ ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳು ತಮ್ಮ ಗ್ರಾಮದಲ್ಲಿರುವ ಸರಕಾರಿ ಹಾಗೂ ಖಾಸಗಿ ಬೋರ್‌ವೆಲ್‌ಗ‌ಳ ಸಂಖ್ಯೆ, ನೀರು ಸಂಗ್ರಹಾಗಾರ, ನೀರು ಶುದ್ಧೀಕರಣ ಘಟಕ ಹಾಗೂ ಎಷ್ಟು ದಿನಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ವರದಿಯನ್ನು 2-3 ದಿನಗಳಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು. ಏ. 23ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿ ಗ್ರಾಮದ ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಕನಿಷ್ಠ ಮೂರರಿಂದ ನಾಲ್ಕು ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಪಂಚಾಯತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಆಯೋಜಿಸಬೇಕು. ಗ್ರಾಮದ ಯಾವೊಬ್ಬ ಅರ್ಹ ಮತದಾರನೂ ಮತದಾನದಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಶೀಲ್ದಾರ್‌ ಪ್ರಕಾಶ ಕುದರಿ, ಇಒ ಎಸ್‌. ಎಸ್‌. ಕಾದ್ರೋಳ್ಳಿ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತ ಬಿ.ಕೆ. ಓಲಿಕಾರ ಮಾತನಾಡಿ, ಬರನಿರ್ವಹಣೆ, ಕುಡಿಯುವ ನೀರು ಮತ್ತು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next