Advertisement

ಡೆಂಘೀ ನಿಯಂತ್ರಣಕ್ಕೆ ಮುನ್ನೆಚರಿಕೆ ವಹಿಸಿ

09:20 PM Jul 30, 2019 | Lakshmi GovindaRaj |

ಚಾಮರಾಜನಗರ: ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ಶುದ್ಧ ಆಹಾರ ಸೇವಿಸುವ ಜೊತೆಗೆ ಮನೆಯ ಸುತ್ತ ಮುತ್ತಲೂ ಸ್ವತ್ಛ ತೆೆಯನ್ನು ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕೆಂದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸಲಹೆ ನೀಡಿದರು.

Advertisement

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಇಲಾಖೆ ವತಿಯಿಂದ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನೀರು ನಿಲ್ಲದಂತೆ ನೋಡಿಕೊಳ್ಳಿ: ಡೆಂಘೀ ನಿಯಂತ್ರಣಕ್ಕೆ ಮುನ್ನೆಚರಿಕೆ ವಹಿಸಬೇಕು. ಸೊಳ್ಳೆಗಳನ್ನು ತಡೆಗಟ್ಟಲು ಪೂರಕವಾಗಿರುವ ಕ್ರಮಗಳನ್ನು ಅನುಸರಿಸಬೇಕು. ಮನೆಯ ಮುಂದೆ ಚರಂಡಿ ನೀರು ನಿಲ್ಲದಂತೆ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಕಳೆ ಗಿಡಗಳನ್ನು ತೆರವುಗೊಳಿಸಬೇಕು. ತೆಂಗಿನ ಚಿಪ್ಪು, ಕರಟ, ಹಳೆಯ ಟೈಯರುಗಳಲ್ಲಿ ನೀರು ನಿಲ್ಲುವುದರಿಂದ ಅವೆನ್ನಲ್ಲ ತೆರವುಗೊಳಿಸಬೇಕು ಎಂದು ಸಲಹೆ ಮಾಡಿದರು.

ಜಾಗೃತಿ ಕಾರ್ಯಕ್ರಮ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್‌. ಮಹೇಶ್‌ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆರೋಗ್ಯ ಇಲಾಖೆ ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮವಹಿಸಿದೆ. ಆಶಾ ಕಾರ್ಯಕರ್ತರು ಮತ್ತು ಪಂಚಾಯಿತಿ ಅಧಿಕಾರಿಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು ಸಹ ಮಾಡಲಾಗುತ್ತಿದೆ ಎಂದರು.

ಅರಿವು ಮೂಡಿಸಬೇಕು: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 81 ಡೆಂಘೀ ಜ್ವರ ಪ್ರಕರಣಗಳು ವರದಿಯಾಗಿವೆ. ಚಾಮರಾಜನಗರ ತಾಲೂಕಿನಲ್ಲಿ 43, ಕೊಳ್ಳೇಗಾಲ ತಾಲೂಕಿನಲ್ಲಿ 15, ಗುಂಡ್ಲುಪೇಟೆ ತಾಲೂಕಿನಲ್ಲಿ 10, ಯಳಂದೂರು ತಾಲೂಕಿನಲ್ಲಿ 13 ಪ್ರಕರಣಗಳು ದಾಖಲಾಗಿವೆ. ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ನಗರಸಭೆ, ಪುರಸಭೆ ಹಾಗೂ 130 ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮುನ್ನೆಚರಿಕೆ ಕ್ರಮವಹಿಸಿ ಅರಿವು ಮೂಡಿಸಬೇಕು ಎಂದರು.

Advertisement

ವಾರಕ್ಕೆ ಒಂದು ದಿನ ಒಣದಿನ ಆಚರಣೆ: ಸಾರ್ವಜನಿಕರು ವಾರಕ್ಕೆ ಒಂದು ದಿನ ಒಣದಿನ ಆಚರಣೆ ನಡೆಸಬೇಕು. ನೀರಿನ ಸಂಗ್ರಹಗಳನ್ನು ಖಾಲಿ ಮಾಡಿ ಸ್ವಚ್ಚಗೊಳಿಸಬೇಕು. ಮನೆಯ ಸುತ್ತ ಮುತ್ತಲ ಪ್ರದೇಶಗಳಲ್ಲಿ ಸ್ವತ್ಛ ತೆೆಗಾಗಿ ಕಾಪಾಡಿಕೊಳ್ಳಬೇಕು. ರೋಗ ಹರಡುವ ಈಡೀಸ್‌ ಸೊಳ್ಳೆಗಳು ಸ್ವಚ್ಚ ಪ್ರದೇಶದಲ್ಲೆ ಹೆಚ್ಚಾಗಿ ಕಂಡು ಬರುವುದರಿಂದ ಎಚ್ಚರ ವಹಿಸಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸಲಹೆ ನೀಡಿದರು.

ಡೆಂಘೀ ಅರಿವು ಜಾಥಾ: ಡೆಂಘೀ ಅರಿವು ಜಾಥಾ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ, ಮಲಗುವಾಗ ಸೊಳ್ಳೆ ಪರದೆ ಬಳಸಿ, ಯಾವುದೇ ನೀರಿರಲಿ ಭಧ್ರವಾಗಿ ಮುಚ್ಚಿಡಿ, ಚಿಕ್ಕ ಕಡಿತ ಭಾರಿ ಅಪಾಯ, ಸ್ವತ್ಛ ತೆ ಕಾಪಾಡಿ ಡೆಂಘೀ ತಡೆಗಟ್ಟಿ, ವಾರದಲ್ಲಿ ಒಂದು ದಿನ ಒಣದಿನ ಆಚರಣೆ ಮಾಡಿ ಎಂಬ ಭಿತ್ತಿ ಫ‌ಲಕಗಳನ್ನು ಹಿಡಿದು ಗಮನ ಸೆಳೆದರು.

ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನದ ಆವರಣದಿಂದ ಜಾಥಾ ಪ್ರಾರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಪಿಡಬ್ಲೂಡಿ ಕಾಲೋನಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಉದ್ಯಾನವನದಲ್ಲಿ ಸಮಾವೇಶಗೊಂಡರು. ತಾಪಂ ಅಧ್ಯಕ್ಷೆ ದೊಡ್ಡಮ್ಮ, ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾ ಕುಮಾರಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಸಿ.ರವಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಎನ್‌.ಕಾಂತರಾಜು, ಮೇಲ್ವಿಚಾರಕ ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next