Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಿನನಿತ್ಯದ ಮಾನವನ ಅವಶ್ಯಕತೆ ಪೂರೈಸುವಲ್ಲಿ ಚ್ಯುತಿ ಬಂದಲ್ಲಿ ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ.ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಸ್ಥಾಪಿಸಲಾಗಿರುವ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಮಹಾಯುದ್ಧದಲ್ಲಿ ಮಾನವನ ಅಪಾರ ಹಾನಿ ಆಗಿದ್ದನ್ನು ಮನಗಂಡ ವಿಶ್ವಸಂಸ್ಥೆ ಮಾನವ ಹಕ್ಕುಗಳಿಗೆ ಚ್ಯುತಿ ಬಾರದಂತೆ ಸಂರಕ್ಷಣೆ ಮಾಡುವ ಉದ್ದೇಶದಿಂದ ಕಾನೂನಾತ್ಮಕವಾಗಿ 30 ಹಕ್ಕುಗಳನ್ನು ಮಾನವ ಹಕ್ಕುಗಳನ್ನಾಗಿ ಜಾರಿಗೆ ತಂದಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೆ ಜೀವನ ಸಾಗಿಸಲು ಅವಶ್ಯಕವಿರುವ ಎಲ್ಲ ಸೇವೆಗಳನ್ನು ನಿಗದಿತ ಸಮಯದಲ್ಲಿ ದೊರಕಿಸಬೇಕು. ಜತೆಗೆ ಅವರ ದೂರುಗಳಿಗೂ ನಿಗದಿತ ಸಮಯದಲ್ಲಿ ಸ್ಪಂದನೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರಿ
ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಇದನ್ನು ಎಲ್ಲ ಹಂತದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲವು ಸಂಘಟನೆಗಳು ವಿನಾಕಾರಣ ಅಧಿಕಾರಿಗಳಿಗೆ ತೊಂದರೆ ನೀಡುತ್ತಿರುವ ವಿಷಯ ಗಮನಿಸಲಾಗಿದೆ. ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ತೊಂದರೆ ನೀಡುವ ಸಂಘ ಸಂಸ್ಥೆಗಳ ವಿರುದ್ಧ ಅಧಿಕಾರಿಗಳು ಸೂಕ್ತ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.
Related Articles
Advertisement
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಐಎಎಸ್ ಪ್ರೋಬೇಷನರಿ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಶಿಷ್ಟಾಚಾರ ತಹಶೀಲ್ದಾರ್ ಪ್ರಕಾಶ ಚಿಂಚೋಳಿಕರ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.