Advertisement

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

09:33 PM Jun 15, 2024 | Team Udayavani |

ಬೆಳಗಾವಿ : ಸಂಭವನೀಯ ಪ್ರವಾಹ ನಿರ್ವಹಣೆಗೆ ರಕ್ಷಣ ತಂಡಗಳು ಸದಾ ಸಿದ್ಧವಾಗಿರಬೇಕು. ನದಿಯ ಒಳಹರಿವು ಹಾಗೂ ಮಳೆಯ ಪ್ರಮಾಣದ ಮೇಲೆ ನಿರಂತರ‌ ನಿಗಾ ವಹಿಸುವ ಮೂಲಕ ಜನ ಹಾಗೂ ಜಾನುವಾರುಗಳ ಜೀವಹಾನಿ ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಶನಿವಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

ಸಂಭವನೀಯ ಪ್ರವಾಹ ನಿರ್ವಹಣೆ, ನೈರುತ್ಯ ಮುಂಗಾರು ಸಿದ್ಧತೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು.

ಅನಾಹುತ ಸಂಭವಿಸಿದಾಗ ರಕ್ಷಣಾ ತಂಡಗಳು ಯಾವ ರೀತಿ ಕಾರ್ಯಾಚರಣೆ ಕೈಗೊಳ್ಳಬೇಕು ಎಂಬುದರ ಕುರಿತು ಕಂದಾಯ, ಪೊಲೀಸ್, ಅಗ್ನಿಶಾಮಕ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಮುಂಚಿತವಾಗಿಯೇ ಸಮನ್ವಯತೆ ಸಾಧಿಸಬೇಕು.ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೇ ಪ್ರವಾಹಬಾಧಿತಗೊಳ್ಳಲಿರುವ ತಾಲ್ಲೂಕುಗಳ ಮಟ್ಟದಲ್ಲೂ ಇಂತಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಹಿಂದಿನ ವರ್ಷಗಳಲ್ಲಿ ಸಂಭವಿಸಿದ ಪ್ರವಾಹ ಹಾನಿ ಸರಿಪಡಿಸಲು ನೀಡಲಾಗಿರುವ ಅನುದಾನವನ್ನು ತತ್ ಕ್ಷಣವೇ ಬಳಕೆ‌ ಮಾಡಬೇಕು ಎಂದು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next