Advertisement
ಚಿಟಗುಪ್ಪ ತಾಲೂಕಿನ ಚಾಂಗಲೇರಾ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿ ಅವರು ಮಾತನಾಡಿದರು. ಭಾರತ ಮೂಲತಃ ಹಳ್ಳಿಗಳ ದೇಶವಾಗಿದೆ. ಹಳ್ಳಿಗಳು ಉದ್ದಾರವಾದಾಗ ಮಾತ್ರ ದೇಶ ಉದ್ದಾರವಾಗಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾಲ-ಕಾಲಕ್ಕೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮೀಣ ಜನರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
Related Articles
Advertisement
ತಮ್ಮ ಗ್ರಾಮದ ಹಾಗೂ ಸುತ್ತಲಿನ ರಸ್ತೆಗಳನ್ನು ಸರಿಪಡಿಸಬೇಕು. ಶಾಲಾ ಕಟ್ಟಡ ನಿರ್ಮಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಂಬಂಧಿಸಿದ 18 ಇಲಾಖೆಗಳ ಅಧಿಕಾರಿಗಳು ಬೆಳಗ್ಗೆ 10ಗಂಟೆಯಿಂದ ತಡರಾತ್ರಿವರೆಗೂ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರ ಮನವಿ ಸ್ವೀಕರಿಸಿದರು. ಒಟ್ಟು ಸ್ವೀಕೃತವಾದ 58 ಅರ್ಜಿಗಳ ಪೈಕಿ 21 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು.
ಆದೇಶ ಪತ್ರ ವಿತರಣೆ
ಅರ್ಜಿಗಳೊಂದಿಗೆ ಆಗಮಿಸಿದ್ದ ಕೆಲವು ಅರ್ಹ ಫಲಾನುಭವಿಗಳಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಮಂಜೂರಾತಿ ಆದೇಶ ಪತ್ರ ವಿವರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ರವೀಂದ್ರ ದಾಮಾ, ತಾಪಂ ಇಒ ವೆಂಕಟ ಶಿಂಧೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.