Advertisement
ಮಂಗಳವಾರವಷ್ಟೇ ಬೆಳಗಾವಿಯಲ್ಲಿ ರಾಜೀನಾಮೆಯ ಅಸ್ತ್ರ ಪ್ರಯೋಗಿಸಿದ್ದ ರಮೇಶ್, ಬುಧವಾರ ಬೆಂಗಳೂರಿಗೆ ಆಗಮಿಸಿ ರಾಜೀನಾಮೆಯ ಪರ್ವಕ್ಕೆ ‘ಸಾಮೂಹಿಕ’ ಪದವನ್ನೂ ಸೇರಿಸಿ ರಾಜ್ಯದ ಎಲ್ಲಾ ಪಕ್ಷಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದಾರೆ. ಇದಷ್ಟೇ ಅಲ್ಲ, ಜಾರಕಿಹೊಳಿ ಸಹೋದರರ ಜಗಳವೂ ಜೋರಾಗಿದ್ದು, ಎಲ್ಲಾ ಗೊಂದಲಗಳಿಗೆ ಸತೀಶ್ ಕಾರಣ ಎಂದು ರಮೇಶ್ ಜಾರಕಿಹೊಳಿ ನೇರವಾಗಿಯೇ ಆರೋಪಿಸುವ ಮೂಲಕ ಇಡೀ ಬಂಡಾಯ ಪರ್ವಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ.
Related Articles
Advertisement
ಮೌನಕ್ಕೆ ಶರಣಾದ ಜೆಡಿಎಸ್: ರಮೇಶ್ ಜಾರಕಿಹೊಳಿ ಬಂಡಾಯದ ಸುದ್ದಿ ತಿಳಿಯುತ್ತಿದ್ದಂತೆ ಉಡುಪಿ ರೆಸಾರ್ಟ್‌ನಿಂದಲೇ ಮಂಗಳವಾರವೇ ಬೆಂಗಳೂರಿಗೆ ಬಂದಿರುವ ಸಿಎಂ, ಶಾಸಕರ ರಾಜೀನಾಮೆ ಕುರಿತಂತೆ ಮಾಹಿತಿ ಪಡೆದು ನಿರಮ್ಮಳರಾಗಿದ್ದಾರೆ. ಅಲ್ಲದೆ, ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಮೂಗು ತೂರಿಸಬಾರದು ಎಂಬ ನಿರ್ಧಾರಕ್ಕೂ ಜೆಡಿಎಸ್ ಬಂದಂತಿದೆ. ಇದು ಸಂಪೂರ್ಣವಾಗಿ ಕಾಂಗ್ರೆಸ್‌ನ ಆಂತರಿಕ ವಿಚಾರವಾಗಿದೆ. ಅದನ್ನು ಅವರೇ ಬಗೆಹರಿಸಿಕೊಳ್ಳಲಿ. ಇದರಲ್ಲಿ ನಾವೇಕೆ ತಲೆ ಹಾಕುವುದು ಎಂಬ ಧೋರಣೆ ಜೆಡಿಎಸ್ ನಾಯಕರಲ್ಲಿದೆ. ಹೀಗಾಗಿಯೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರ ಬಳಿ ಈ ಸಂಬಂಧ ಪ್ರತಿಕ್ರಿಯೆ ಕೇಳಿದರೂ, ಅವರು ಉತ್ತರಿಸದೇ ನುಣುಚಿಕೊಂಡಿದ್ದಾರೆ. ಇನ್ನೊಂದು ಮೂಲಗಳ ಪ್ರಕಾರ ಜೆಡಿಎಸ್, ಬಿಜೆಪಿ ಶಾಸಕರನ್ನೇ ಸೆಳೆಯಲು ಎಲ್ಲಾ ತಯಾರಿ ನಡೆಸಿದೆ ಎನ್ನಲಾಗಿದ್ದು, ಈಗಾಗಲೇ ಉತ್ತರ ಕರ್ನಾಟಕದ ಐದಾರು ಶಾಸಕರ ಜತೆ ಕುಮಾರಸ್ವಾಮಿ ಅವರೇ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಅವರೂ ಸೂಕ್ತ ಸ್ಪಂದನೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಸಚಿವ ಡಿ.ಕೆ. ಶಿವಕುಮಾರ್ ನನ್ನ ಲೆವೆಲ್ ನಾಯಕ ಅಲ್ಲ. ನನ್ನ ನಾಯಕ ರಾಹುಲ್ ಗಾಂಧಿ, ಅವರ ಜೊತೆ ಚರ್ಚಿಸಿ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಳ್ಳುತ್ತೇನೆ. ಒಬ್ಬನೇ ರಾಜೀನಾಮೆ ಕೊಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಇನ್ನೂ ಕೆಲವರ ಜೊತೆ ಚರ್ಚಿಸಿ ಒಟ್ಟಿಗೆ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ.• ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮನವೊಲಿಕೆಗೆ ಪಕ್ಷದಲ್ಲಿ ನಾಯಕರಿದ್ದಾರೆ. ಜಿಲ್ಲಾ ಉಸ್ತು ವಾರಿ ಸಚಿವರಿದ್ದಾರೆ. ನನಗೆ ಸಿಕ್ಕರೆ ನಾನೂ ಅವರ ಜೊತೆ ಮಾತನಾಡು ತ್ತೇನೆ. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಇಲ್ಲಿಯವರೆಗೆ ನಾವು ಅವರನ್ನು ಗೌರವದಿಂದ ಕಂಡಿದ್ದೇವೆ. ಭಗವಂತ ಅವರ ಆಸೆ ಈಡೇರಿಸಲಿ.
● ಡಿ.ಕೆ. ಶಿವಕುಮಾರ್, ಜಲ ಸಂಪನ್ಮೂಲ ಸಚಿವ ನಾನು ಅಳುವುದಿಲ್ಲ. ರಮೇಶನೇ ದೊಡ್ಡ ಡ್ರಾಮಾ ಮಾಸ್ಟರ್. ಬಹುಶ: ಯಾವುದೋ ‘ವಸ್ತು’ ಕಳೆದುಕೊಂಡಿದ್ದಾನೆ. ಅದಕ್ಕಾಗಿಯೇ ಈ ರೀತಿ ವರ್ತನೆ ಮಾಡುತ್ತಿದ್ದಾನೆ. ನಾನೇನು ಅವರ ಮಂತ್ರಿಗಿರಿ ಕಸಿದುಕೊಂಡಿಲ್ಲ.
● ಸತೀಶ್ ಜಾರಕಿಹೊಳಿ, ಸಚಿವ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರೊಂದಿಗೆ, ಅಥಣಿ ಶಾಸಕ ಮಹೇಶ್ ಕುಮಠಳ್ಳಿ, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಹಿರೆಕೆರೂರು ಶಾಸಕ ಬಿ.ಸಿ. ಪಾಟೀಲ್, ಮುಳಬಾಗಿಲು ಪಕ್ಷೇತರ ಶಾಸಕ ನಾಗೇಶ್ ಅವರು ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರೊಂದಿಗೆ ಗುರುತಿಸಿಕೊಂಡಿದ್ದ ಶಾಸಕರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದು, ಅವರ ವಿರುದ್ಧ ಇರುವ ಆರೋಪಗಳನ್ನು ಮುಂದಿಟ್ಟುಕೊಂಡು ಬೆದರಿಸುವ ಮೂಲಕ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಯತ್ನ ಮುಂದುವರೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.