ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಆಗಸ್ಟ್ 22) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಪರಾರಿಯಾಗಲು ಯತ್ನ: ಮಂಗಳೂರಿನಲ್ಲಿ ಆರೋಪಿ ಕಾಲಿಗೆ ಗುಂಡು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 872.28 ಅಂಕಗಳಷ್ಟು ಕುಸಿತದೊಂದಿಗೆ 58,773.87 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 257.80 ಅಂಕಗಳ ಇಳಿಕೆಯೊಂದಿಗೆ 17,490.70 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಟಾಟಾ ಸ್ಟೀಲ್, ಏಷ್ಯನ್ ಪೇಂಟ್ಸ್, ಅದಾನಿ ಪೋರ್ಟ್ಸ್, ಟಾಟಾ ಮೋಟಾರ್ಸ್ ಮತ್ತು ಜೆಎಸ್ ಡಬ್ಲ್ಯು ಸ್ಟೀಲ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಸೆನ್ಸೆಕ್ಸ್, ನಿಫ್ಟಿ ಭಾರೀ ಕುಸಿತದ ನಡುವೆಯೂ ಐಟಿಸಿ, ಕೋಲ್ ಇಂಡಿಯಾ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ನೆಸ್ಲೆ ಇಂಡಿಯಾ ಮತ್ತು ಬ್ರಿಟಾನಿಯಾ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ.