ಬಾಗಲಕೋಟೆ: ಕೇಂದ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇರಬಹುದು. ಅದಕ್ಕಾಗಿಯೇ ಪ್ರವಾಹ ಪರಿಹಾರ ನೀಡುವಲ್ಲಿ ವಿಳಂಬ ಆಗಿರಬಹುದು. ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ಬಾರದ ಹಿನ್ನೆಲೆಯಲ್ಲಿ ನನಗೂ ಸ್ವಲ್ಪ ಆತಂಕವಾಗಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು.
ಜಮಖಂಡಿ ತಾಲೂಕಿನ ಮುತ್ತೂರಿನಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರವಾಹ ಪರಿಹಾರ ನೀಡದಿರಲು ಆರ್ಥಿಕ ಕುಸಿತ ಕಾರಣ ಇರಬಹುದು. ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್‌ನಲ್ಲೂ ಪ್ರವಾಹ ಬಂದಿದೆ. ಅಲ್ಲಿಯೂ ಪರಿಹಾರ ಕೊಟ್ಟಿಲ್ಲ. ರಾಜ್ಯಕ್ಕೆ ಕೂಡಲೇ ಪ್ರವಾಹ ಪರಿಹಾರ ಕೊಡಿ ಎಂದು ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಗುಜರಾತ, ಮಹಾರಾಷ್ಟ್ರ ಸಹಿತ ಹಲವು ರಾಜ್ಯಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ವೀಕ್ಷಣೆ ಮಾಡಿದೆ. ಆದರೆ, ಎಲ್ಲೂ ಪರಿಹಾರ ಘೋಷಣೆ ಮಾಡಿಲ್ಲ. ಇದಕ್ಕೆ ಆರ್ಥಿಕ ಕೊರತೆ ಇರಬಹುದು, ಇಲ್ಲವೇ ಬೇರೆ ಏನು ಸಮಸ್ಯೆ ಇದೆ ಎಂಬುದು ವಿಚಾರ ಮಾಡದೇ ತಿಳಿಯುವುದಿಲ್ಲ. ಆದರೆ, ಕರ್ನಾಟಕದ ಜನತೆ, ಕೇಂದ್ರದ ನೆರವಿನ ನಿರೀಕ್ಷೆಯಲ್ಲಿದ್ದಾರೆ ಎಂಬುದನ್ನು ಪ್ರಧಾನಿಗಳ ಗಮನಕ್ಕೆ ಪತ್ರದ ಮೂಲಕ ತಂದಿದ್ದೇನೆ ಎಂದರು.
ಪ್ರಧಾನಿ ಮೋದಿ ಅವರು ದೇಶದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹಲವಾರು ಒಳ್ಳೆಯ ಯೋಜನೆ ನೀಡಿದ್ದಾರೆ. ದೇಶದಲ್ಲಿ ಹಲವು ಒಳ್ಳೆಯ ಕೆಲಸಗಳಾಗಿವೆ. ಜನರಿಗೆ ಉಪಯುಕ್ತವಾದ ಕೆಲಸ ಆಗಿವೆ. ಈಗ ಪ್ರವಾಹ ಸಂತ್ರಸ್ತರಿಗೂ ಸ್ಪಂದಿಸಬೇಕು ಎಂಬುದು ರಾಜ್ಯದ ಜನತೆಯ ನಿರೀಕ್ಷೆಯಾಗಿದೆ. ನೆರೆ ಪರಿಹಾರ ನೀಡುವಲ್ಲಿ ವಿಳಂಬ ಆಗುತ್ತಿದೆ. ಶೀಘ್ರ ಪರಿಹಾರ ಬರಬಹುದೆಂಬ ವಿಶ್ವಾಸವಿದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟ್ಟಿ ಹಾಕುವ ಕೆಲಸ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ನನಗೆ ಹಾಗೆ ಅನಿಸಿಲ್ಲ. ಯಡಿಯೂರಪ್ಪ ಮತ್ತು ಸಂಘ- ಪರಿವಾರದ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇದನ್ನು ಪರಿವಾರದವರೇ ಹೇಳಿಕೊಂಡಿದ್ದಾರೆ. ಹೀಗಾಗಿ ಯಾವುದೇ ತೊಂದರೆ ಆಗಿಲ್ಲ ಎಂದು