Advertisement
ಸರಕಾರಿ ಪ್ರೌಢಶಾಲೆ ಪೆರ್ಮನ್ನೂರು, ಬಬ್ಬುಕಟ್ಟೆ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಎಂಟನೇ ತರಗತಿಗೆ ಸೇರ್ಪಡೆಯಾಗಿರುವ ವಿದ್ಯಾರ್ಥಿಗಳಿಗೆ ಹೂ ನೀಡುವ ಮೂಲಕ ಶಾಲೆಗೆ ಸ್ವಾಗತಿಸಿ, ಮಾತನಾಡಿದರು. ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಅತ್ಯಂತ ಮಹತ್ವದ ಕಾಲಘಟ್ಟವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಯ್ಕೆ ನಿಮ್ಮ ಭವಿಷ್ಯವನ್ನು ನಿರ್ಧರಿಸಲು ಪೂರಕ ಎಂದರು.
Related Articles
Advertisement
ಪೆರ್ಮನ್ನೂರು ಶಾಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕೆಲವು ಆಡಳಿತಾತ್ಮಕ ಸಮಸ್ಯೆಗಳಿದ್ದು, ಶಾಲೆಯ ಭೂಮಿಯ ವಿಚಾರದಲ್ಲಿ ಕುಳಿತು ಬಗೆಹರಿಸಿ ಉತ್ತಮ ಮೂಲ ಸೌಕರ್ಯ ನಿರ್ಮಾಣ ಮಾಡುವ ಕಾರ್ಯ ನನ್ನದು. ಇಲ್ಲಿನ ಸಮಸ್ಯೆಗೆ ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸುತ್ತೇನೆ. ಶಿಕ್ಷಕರು ನಿಶ್ಚಿಂತತೆಯಲ್ಲಿ ವಿದ್ಯಾರ್ಥಿ ಗಳಿಗೆ ಉತ್ತಮ ಶಿಕ್ಷಣ ನೀಡುವ ಕಾರ್ಯ ನಡೆಸಿ. ತಾತ್ಕಾಲಿಕ ಕ್ರಮವಾಗಿ ಶಾಲೆಯ ಕಟ್ಟಡ ದುರಸ್ತಿಗೆ 10 ಲಕ್ಷ ರೂ. ಅನುದಾನ ನೀಡಲು ಬದ್ಧ. -ಯು.ಟಿ. ಖಾದರ್, ಶಾಸಕರು