Advertisement

ಸಂವಿಧಾನ ವಿಶ್ವಕ್ಕೆ ಮಾದರಿ: ನ್ಯಾ|ಪ್ರೇಮಾವತಿ

04:52 PM Nov 27, 2019 | Naveen |

ಬೀದರ: ಜನರಿಂದ ಜನರಿಗೋಸ್ಕರ ಜನರೇ ನಡೆಸುವ ಸರ್ಕಾರ ಎನ್ನುವ ಆಶಯದಡಿ ರಚನೆಗೊಂಡಿರುವ ಭಾರತದ ಸಂವಿಧಾನ ಅತ್ಯಂತ ದೊಡ್ಡದಾಗಿದ್ದು, ಇದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಮನಗೂಳಿ ಪ್ರೇಮಾವತಿ ಹೇಳಿದರು.

Advertisement

ನಗರದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಜರುಗಿದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

ಕರ್ನಾಟಕ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ವಿಜಯಕುಮಾರ ಗಂಗು ಅವರು ಸಂವಿಧಾನ ಪೂರ್ವ ಪೀಠಿಕೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಝರೀನಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ಪಿ.ಗೌಡ, 2ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಯಮನಪ್ಪ.ಕೆ, ಹಿರಿಯ ಸಿವಿಲ್‌ ನ್ಯಾಯಾಧೀಶ ಸಿದ್ರಾಮ ಟಿ.ಪಿ., ಸಂಘದ ಉಪಾಧ್ಯಕ್ಷ ಪ್ರಕಾಶ ವಿ.ಎಂ., ಪ್ರಧಾನ ಕಾರ್ಯದರ್ಶಿ ಧನರಾಜ ಬಿರಾದಾರ, ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next