Advertisement

ನೌಕರರನ್ನು ವಜಾ ಮಾಡದಿರಿ: ಚವ್ಹಾಣ

04:29 PM Apr 16, 2020 | Naveen |

ಬೀದರ: ಲಾಕ್‌ಡೌನ್‌ ಅವಧಿಯಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಸ್ಪಷ್ಟವಾಗಿ ಹೇಳಿದ್ದು, ಹಾಗಾಗಿ ಬ್ರಿಮ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ದರ್ಜೆ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡಬಾರದು. ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಸಂಬಂಧಿತರೊಂದಿಗೆ ಸಮಾಲೋಚನೆ ನಡೆಸಿ ನಿವಾರಿಸಿಕೊಳ್ಳಬೇಕು ಎಂದು ಸಚಿವ ಪ್ರಭು ಚವ್ಹಾಣ ಬ್ರಿಮ್ಸ್‌ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Advertisement

ಗುತ್ತಿಗೆದಾರರು ಬದಲಾದ ಮಾತ್ರಕ್ಕೆ ನಿರಂತರವಾಗಿ ಕೆಲಸ ಮಾಡಿಕೊಂಡು ಬಂದಿರುವ “ಡಿ’ ದರ್ಜೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದು ನ್ಯಾಯವಲ್ಲ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಲ್ಲಿ ಮುಂದುವರಿಸಬೇಕು. ಬ್ರಿಮ್ಸ್‌ ನಿರ್ದೇಶಕರು ಪ್ರಧಾನಿಗಳ ಮನವಿಯನ್ನೂ ತಿರಸ್ಕರಿಸಿ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆಯುವುದು ಅನಿವಾರ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನ ಮೊದಲೇ ಸಂಕಷ್ಟದಲ್ಲಿದ್ದು, ಮಾನವೀಯತೆ ಮರೆತು ರಾಜಕಾರಣ ಮಾಡಲು ಹೊರಟರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಬ್ರಿಮ್ಸ್‌ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next