Advertisement
ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರವಿವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಅವರು, ಜನರ ಆಶಯದಂತೆ ಔರಾದ-ಬೀದರ ಮಧ್ಯದ ರಸ್ತೆ 336 ಕೋಟಿ ರೂ. ವೆಚ್ಚದಲ್ಲಿ ಅತ್ಯಂತ ಸುಸ್ಸಜ್ಜಿತವಾಗಿ ನಿರ್ಮಾಣವಾಗಲಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.
Related Articles
Advertisement
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಮೂರು ಕಂತುಗಳು ಸೇರಿ 61.42 ಕೋಟಿ ರೂ. ಸಹಾಯಧನವನ್ನು ಸುಮಾರು 1,55,526 ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ/ ವಸತಿ ನಿಲಯಗಳ ನಿರ್ವಹಣೆ ವೆಚ್ಚಕ್ಕಾಗಿ361.84 ಲಕ್ಷ ರೂ. ಬಿಡುಗಡೆಯಾದ ಅನುದಾನದಲ್ಲಿ 214.83 ಲಕ್ಷ ರೂ. ಅನುದಾನ ಬಳಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಬಿದಾಯಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದ ಹೆಣ್ಣುಮಕ್ಕಳ ಮದುವೆಯ ಕಾರ್ಯಕ್ರಮದ ವೆಚ್ಚಕ್ಕಾಗಿ ಸಹಾಯಧನ ನೀಡಲು ಅರ್ಹ 706 ಫಲಾನುಭವಿಗಳಿಗೆ
ತಲಾ 50,000 ರೂ.ದಂತೆ ಒಟ್ಟು 353 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆ, ಚರ್ಚ್ ದುರಸ್ಥಿ/ ನವೀಕರಣ, ಚರ್ಚ್‌ಗಳ ಜಿರ್ಣೋದ್ಧಾರ/ ನವೀಕರಣ, ಚರ್ಚ್ ಕಂಪೌಂಡ್‌ವಾಲ್ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದರು. ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ರಹೀಮ್ ಖಾನ್, ಬಂಡೆಪ್ಪ ಖಾಶೆಂಪೂರ, ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ವಿಜಯಸಿಂಗ್, ಜಿಪಂ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ್, ಜಿಲ್ಲಾ ಧಿಕಾರಿ ಎಚ್.ಆರ್. ಮಹಾದೇವ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಉಪಸ್ಥಿತರಿದ್ದರು. ಪಥಸಂಚಲನ: ಗಣರಾಜ್ಯೋತ್ಸವ ಪ್ರಯುಕ್ತ ನಾಗರಿಕ ಪೊಲೀಸ್, ಅರಣ್ಯ ಇಲಾಖೆ, ಸಶಸ್ತ್ರ ಪೊಲೀಸ್, ಗೃಹರಕ್ಷಕ ದಳ, ಎನ್‌ಸಿಸಿ ಭಾರತೀಯ ಸೇವಾದಳ ಹೀಗೆ 13 ತುಕಡಿಗಳಿಂದ ಭಾಲ್ಕಿ ಡಿವೈಎಸ್ಪಿ ಡಾ|ದೇವರಾಜ ಅವರ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು.