ಬೀದರ: ಜಿಲ್ಲಾಡಳಿತದ ವತಿಯಿಂದ ಫೆ.15ರಂದು ಆಚರಿಸಲಾಗುವ ಸಂತ ಸೇವಾಲಾಲ್ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಸಂಬಂಧಿ ಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿ ಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.
ಅಂದು ಬೆಳಗ್ಗೆ 9ಕ್ಕೆ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಸಂತ ಸೇವಾಲಾಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, 9.30ಕ್ಕೆ ಎಲ್ಲ ಅ ಧಿಕಾರಿಗಳು, ಸಿಬ್ಬಂದಿ ವರ್ಗ, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸೇರಬೇಕು. ಪೂಜೆ ನಂತರ ಮೆರವಣಿಗೆಗೆ ಚಾಲನೆ ನೀಡಲಾಗುವುದು. 11.30ಕ್ಕೆ ಮುಖ್ಯ ಕಾರ್ಯಕ್ರಮ ನಡೆಯುವುದು ಎಂದು ತಿಳಿಸಿದರು.
ಎಲ್ಲ ಶಾಲಾ-ಕಾಲೇಜುಗಳಲ್ಲಿ ಜಯಂತಿ ಆಚರಿಸುವಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು. ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳನ್ನು ನಿಯೋಜಿಸಿ, ಮುಖ್ಯ ಕಾರ್ಯಕ್ರಮಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಮೆರವಣಿಗೆಯಲ್ಲಿ ಸಂತ ಸೇವಾಲಾಲ್ ಭಾವಚಿತ್ರವನ್ನು ಅಚ್ಚುಕಟ್ಟಾದ ವಾಹನದಲ್ಲಿ ಅಲಂಕರಿಸಿ, ಒಬ್ಬ ನುರಿತ ಸಿಬ್ಬಂದಿ ನೇಮಿಸಬೇಕು. ಎಲ್ಲ ವೃತ್ತಗಳ ಮೇಲೆ ದೀಪಾಲಂಕಾರ, ಸ್ವತ್ಛತೆ ಕಾಪಾಡುವುದು ಹಾಗೂ ಮುಖ್ಯ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ನಗರಸಭೆ ಆಯುಕ್ತರಿಗೆ ಹಾಗೂ ಮೆರವಣಿಗೆ ಸಾಗುವ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಯಿತು. ಸಮಾಜದ ಮುಖಂಡರಾದ ಬಸವರಾಜ ಪವಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸುವಂತಾಗಬೇಕು ಎಂದರು. ಡಿವೈಎಸ್ಪಿ ಬಸವೇಶ್ವರ ಹಿರಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.