Advertisement

ಮತದಾರರ ಪಟ್ಟಿ ಪರಿಷ್ಕರಣೆ-ವೀಕ್ಷಕರಿಂದ ಸಭೆ

06:24 PM Jan 29, 2020 | Naveen |

ಬೀದರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಭಾರತ ಚುನಾವಣಾ ಆಯೋಗದ ಕಾರ್ಯನಿಮಿತ್ತ ಚುನಾವಣಾ ಪಟ್ಟಿ ವೀಕ್ಷಕರಾದ ಉಮಾ ಮಹಾದೇವನ್‌ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.

Advertisement

ಯುವ ಮತದಾರರನ್ನು ಹೆಚ್ಚು ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಸ್ವೀಪ್‌ ಸಮಿತಿಯಿಂದ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಂಘಟಿಸಿದ ಬಗ್ಗೆ ಮಾಹಿತಿ ಪಡೆದರು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಬಹುತೇಕ ಶಾಲಾ ಶಿಕ್ಷಕರು, ಒಂದಷ್ಟು ಜನ ಗ್ರಾಮ ಲೆಕ್ಕಿಗರು ಮತ್ತು ಆಶಾ ಕಾರ್ಯಕರ್ತೆಯರು ಬಿಎಲ್‌ಒಗಳಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತದಾರರ ಮನೆಮನೆಗೆ ತೆರಳಿ ಅರ್ಜಿಗಳನ್ನು ನೀಡಿ ಯುವ ಮತದಾರರನ್ನು ಮತದಾರರ ಪಟ್ಟಿ ವ್ಯಾಪ್ತಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ|ಎಚ್‌.ಆರ್‌. ಮಹಾದೇವ್‌ ಅವರು ಸಭೆಗೆ ಮಾಹಿತಿ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಬಿಎಲ್‌ಒ ಅವರು ಕಾಳಜಿಯಿಂದ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಮಹಾದೇವನ್‌ ಅವರು ಸಲಹೆ ನೀಡಿದರು. ಅರ್ಜಿಗಳ ಸಂಖ್ಯೆ 6, 7, 8 ಮತ್ತು 8ಎ ಗಳ ವಿಲೇವಾರಿಗೆ ಸಂಬಂಧಿಸಿದಂತೆ ಚರ್ಚಿಸಿ ತಹಶೀಲ್ದಾರ್‌ ಅವರಿಂದ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ
ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ್‌, ಭಂವರಸಿಂಗ್‌ ಮೀನಾ, ವಿವಿಧ ತಾಲೂಕುಗಳ ತಹಶೀಲ್ದಾರರಾದ ಚಂದ್ರಶೇಖರ, ಕೀರ್ತಿ ಚಾಲಕ, ಸಾವಿತ್ರ ಸಲಗರ, ಅಣ್ಣಾರಾವ್‌ ಪಾಟೀಲ ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next