Advertisement
ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಆದರೆ, ಕೋವಿಡ್ 19 ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿತ್ತು. ಈ ಸಂಬಂಧ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಶನಿವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೀಡಿ ಕಂಪೆನಿಗಳ ಮಾಲಕರು, ಬೀಡಿ ಕಾರ್ಮಿಕ ಮುಖಂಡರ ಜತೆಗೆ ಸಭೆಯನ್ನು ನಡೆಸಿದ್ದರು. ಬೀಡಿ ಉದ್ಯಮ ಪುನರಾರಂಭಿಸುವ ಬಗ್ಗೆ ಕಾರ್ಮಿಕರು, ಕಂಟ್ರಾಕುrದಾರರು ಮನವಿ ಮಾಡಿದ್ದರು.
Related Articles
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಬೀಡಿ ಉದ್ಯಮ ಪುನರಾರಂಭಗೊಳ್ಳುವುದು ಉತ್ತಮ ಬೆಳವಣಿಗೆ. ಕೋವಿಡ್ 19ದಿಂದಾಗಿ ಕೆಲಸವಿಲ್ಲದೆ ಕಂಗೆಟ್ಟಿರುವ ಬೀಡಿ ಕಾರ್ಮಿಕರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಶೀಘ್ರದಲ್ಲಿ ಕಾರ್ಮಿಕರಿಗೆ ವರ್ಷದ ಬೋನಸ್ ಕೂಡ ದೊರೆಯಲಿ.
– ಮಹಮ್ಮದ್ ರಫಿ,ಅಧ್ಯಕ್ಷರು,
ಕರ್ನಾಟಕ ಕರಾವಳಿ ಬೀಡಿ ವರ್ಕರ್ ಯೂನಿಯನ್ (ಎಚ್.ಎಂ.ಎಸ್.)
Advertisement