Advertisement

Dandeli: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು

08:21 AM Mar 11, 2024 | Team Udayavani |

ದಾಂಡೇಲಿ : ತಾಲೂಕಿನ ದಾಂಡೇಲಿ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಬರುವ ಕರ್ಕಾ ಕ್ರಾಸ್ ಹತ್ತಿರ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಸಾವನ್ನಪ್ಪಿದ ಘಟನೆ ಇಂದು ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಈ ರಸ್ತೆಯಲ್ಲಿ ಕರಡಿಯೊಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕರಡಿ ಸ್ಥಳದಲ್ಲೇ ಸಾವನ್ನಪ್ಪಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: ಕರಾವಳಿಗೆ 3 ಬಹೂಪಯೋಗಿ ಬಂದರು: ಮಂಗಳೂರು, ಮಲ್ಪೆ, ಬೈಂದೂರಿನಲ್ಲಿ ಅಭಿವೃದ್ಧಿ ಯೋಜನೆ

Advertisement

Udayavani is now on Telegram. Click here to join our channel and stay updated with the latest news.

Next