Advertisement
ತಾಲೂಕಿನ ಅಣ್ಣೂರುಕೇರಿ ಗ್ರಾಮಕ್ಕೆ ಬುಧವಾರ ಬೆಳಂಬೆಳಗ್ಗೆ ದಾರಿತಪ್ಪಿ ಬಂದ ಕರಡಿಯನ್ನು ಕಂಡ ಜನರು ಆತಂಕಕ್ಕೀಡಾಗಿದ್ದರು. ಈ ವೇಳೆ ಜನರ ಕೂಗಾಟದಿಂದ ಗಾಭರಿಗೊಂಡ ಕರಡಿಯು ಜಮೀನಿನಲ್ಲಿ ಅತ್ತಿಂದಿತ್ತ ಓಡಾಡಿ ನಿತ್ರಾಣಗೊಂಡಿತ್ತು. ನಂತರ ಸ್ಥಳೀಯ ರೈತರಿಂದ ಮಾಹಿತಿ ಅರಿತ ಗುಂಡ್ಲುಪೇಟೆ ಬಫರ್ ಜೋನ್ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿ, ಬಂಡೀಪುರ ಹುಲಿ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಲೆಯ ಮೂಲಕ ಕರಡಿಯನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.
Related Articles
Advertisement