ಪ್ಯಾರೀಸ್: ಭಾರತ ಮತ್ತು ಫ್ರಾನ್ಸ್ ನಡುವೆ 36 ರಫೇಲ್ ಯುದ್ಧ ವಿಮಾನ ಖರೀದಿಗಾಗಿ ಒಪ್ಪಂದ ನಡೆದಿದ್ದು, ಔಪಚಾರಿಕವಾಗಿ ಮಂಗಳವಾರ ಡಸಾಲ್ಟ್ ಕಂಪನಿ ಸಿಇಒ ಔಪಚಾರಿಕವಾಗಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲ ರಫೇಲ್ ಯುದ್ಧ ವಿಮಾನವನ್ನು ಸ್ವೀಕರಿಸಿದರು.
ರಾಜನಾಥ್ ಸಿಂಗ್ ಮೂರು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದು, ರಫೇಲ್ ಯುದ್ಧ ವಿಮಾನ ಹಸ್ತಾಂತರದ ನಂತರ ಸಿಂಗ್ ಅವರು ಶಾಸ್ತ್ರ ಪೂಜೆ(ಆಯುಧ)ಯನ್ನು ನೆರವೇರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
36 ಯುದ್ಧ ವಿಮಾನಗಳಲ್ಲಿ ಫ್ರಾನ್ಸ್ ಮೊದಲ ಹಂತದ ನಾಲ್ಕು ರಫೇಲ್ ವಿಮಾನಗಳನ್ನು ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಭಾರತಕ್ಕೆ ಹಸ್ತಾಂತರಿಸಲಿದೆ. ಭಾರತ ಮತ್ತು ಫ್ರಾನ್ಸ್ ನಡುವೆ 36 ರಫೇಲ್ ಯುದ್ಧ ವಿಮಾನ ಖರೀದಿಗಾಗಿ 59 ಸಾವಿರ ಕೋಟಿ ರೂಪಾಯಿ ಒಪ್ಪಂದ ಮಾಡಿಕೊಂಡಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಪ್ಯಾರೀಸ್ ನಲ್ಲಿ ಭೇಟಿಯಾಗಿ ರಕ್ಷಣೆ ಮತ್ತು ಭದ್ರತಾ ಸಂಬಂಧಿ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು.