ಬೆಂಗಳೂರು: ಐ ಮಾನಿಟರಿ ಅಡ್ವೆಸರಿ(ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿ ಜಪ್ತಿಗೆ ಮೀನಮೇಷ ಎಣಿಸುತ್ತಿರುವ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಎರಡುವಾರದಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲು ತೀರ್ಮಾನಿ ಸಬೇಕು ಎಂದು ತಾಕೀತು ಮಾಡಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರುಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಎ.ಎಸ್.ಓಕ್ ಅವರ ನೇತೃತ್ವದ ವಿಭಾಗೀಯನ್ಯಾಯಪೀಠ ಶುಕ್ರವಾರ ಈ ನಿರ್ದೇಶನನೀಡಿದೆ. ವಿಚಾರಣೆ ವೇಳೆ, ರೋಷನ್ ಬೇಗ್‌ಆಸ್ತಿ ಜಪ್ತಿ ಸಂಬಂಧ ಈವರೆಗೆ ಕೈಗೊಂಡಿರುವಕ್ರಮಗಳ ಬಗ್ಗೆ ಸರ್ಕಾರದ ಪರ ವಕೀಲರಿಗೆ ನ್ಯಾಯಪೀಠ ಪ್ರಶ್ನಿಸಿತು.
ಅದಕ್ಕೆ ಸರ್ಕಾರದಪರ ವಕೀಲರು ಉತ್ತರಿಸಿ, ಲಾಕ್ ಡೌನ್‌ಕಾರಣಕ್ಕೆ ಕ್ರಮ ಜರುಗಿಸಲಾಗಿಲ್ಲ. ಈವಿಚಾರದ ಬಗ್ಗೆ ಕಂದಾಯ ಇಲಾಖೆ ಪ್ರಧಾನಕಾರ್ಯದರ್ಶಿ ಹಾಗೂ ಸಕ್ಷಮ ಪ್ರಾಧಿಕಾರದನಡುವೆ ಪತ್ರ ವ್ಯವಹಾರ ನಡೆದಿದೆ ಎಂದುಸಮಜಾಯಿಷಿ ನೀಡಿದರು.ಇದನ್ನು ಒಪ್ಪದ ನ್ಯಾಯಪೀಠ, ಲಾಕ್‌ಡೌನ್‌ಗೂ ಜಪ್ತಿ ಮಾಡುವುದರಲ್ಲಿನ ವಿಳಂಬಕ್ಕೂ ಯಾವುದೇ ಸಂಬಂಧವಿಲ್ಲ.ಏಪ್ರಿಲ್ ನಲ್ಲಿಯೇ ಈ ಬಗ್ಗೆ ನ್ಯಾಯಾಲಯ ಸ್ಪಷ್ಟ ಆದೇಶ ನೀಡಿತ್ತು.
ಆದಾಗ್ಯೂ ಸರ್ಕಾರಆಸ್ತಿ ಜಪ್ತಿಗೆ ಕ್ರಮ ಕೈಗೊಂಡಿಲ್ಲ. ಸರ್ಕಾರದವಿಳಂಬದಿಂದ ಆರೋಪಿ ಆಸ್ತಿಗಳನ್ನುಪರಭಾರೆ ಮಾಡಿದರೆ ಯಾರು ಹೊಣೆ ಎಂದುಪ್ರಶ್ನಿಸಿತು. ಅಲ್ಲದೆ, ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ಕಾರ್ಯವನ್ನು ವಿಳಂಬ ಮಾಡಲಾಗುತ್ತಿದೆ ಎನ್ನುವ ಆರೋಪವಿದೆ. ಸರ್ಕಾರಸಹ ರೋಷನ್ ಬೇಗ್ ಆಸ್ತಿ ಜಪ್ತಿಗೆ ಹಿಂಜರಿಯುತ್ತಿದೆ. ಸರ್ಕಾರದ ಈ ನಡೆ ನಿಜಕ್ಕೂನ್ಯಾಯಾಲಯಕ್ಕೆ ಅಚ್ಚರಿ ತರಿಸಿದೆ ಎಂದುಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ,ಎರಡು ವಾರದಲ್ಲಿ ರೋಷನ್ ಬೇಗ್ ಅವರಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಬೇಕು ಎಂದುಸರ್ಕಾರಕ್ಕೆ ತಾಕೀತು ಮಾಡಿತು.