Advertisement
ನಗರದ ಮಾರ್ಕೆಟ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಒಳಚರಂಡಿ ಯೋಜನೆಗೆ ನಿರ್ಮಿಸಿರುವ ಮ್ಯಾನ್‌ಹೋಲ್ ಕ್ಯಾಪ್ ಹಾಳಾಗಿರುವುದು ಕಂಡು ಬಂದಿತು. ಈ ಬಗ್ಗೆ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಒಳಚರಂಡಿ ಕಾಮಗಾರಿಗೆ ಒಟ್ಟಾರೆ 4400 ಮ್ಯಾನ್‌ಹೋಲ್‌ಗಳನ್ನು ನಿರ್ಮಿಸಬೇಕಿದ್ದು, ಈವರೆಗೂ 3250 ಮ್ಯಾನ್‌ಹೋಲ್‌ಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
Related Articles
Advertisement
ಶಾಸಕ ಸಿ.ಟಿ.ರವಿ ಮಾತನಾಡಿ, 2012ರಲ್ಲಿಯೇ ರಿಸೀವಿಂಗ್ ಚೇಂಬರ್ ನಿರ್ಮಾಣದ ಬಗ್ಗೆ ತಾವು ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳ ಗಮನಕ್ಕೆ ತಂದಿದೆ. ಆಗ ಕೇವಲ 800 ರಿಸೀವಿಂಗ್ ಚೇಂಬರ್ ಮಾಡಲಾಗಿತ್ತು. ಈಗ ನಿರ್ಮಿಸುತ್ತಿರುವ ರಿಸೀವಿಂಗ್ ಚೇಂಬರ್ ಗುಣಮಟ್ಟ ಸರಿ ಇಲ್ಲ. ಇದು ವೈಜ್ಞಾನಿಕವಾಗಿಯೂ ಇಲ್ಲ. ಇದನ್ನು ಬದಲಿಸಿ ಎಂಬ ಸೂಚನೆ ನೀಡಿದ್ದೆ. ತಾವು ಸೂಚನೆ ನೀಡಿದ ನಂತರವೂ ಪುನಃ ಅದೇ ಮಾದರಿಯಲ್ಲಿ ಮಾಡಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಸಹ ಕೂಡಲೇ ರಿಸೀವಿಂಗ್ ಚೇಂಬರ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ಮಾಡುವಂತೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೋಷನ್ ಬೇಗ್, ಒಳಚರಂಡಿ ಕಾಮಗಾರಿಯ ಗುಣಮಟ್ಟದಲ್ಲಿ ಸಾಕಷ್ಟು ಲೋಪಗಳಿವೆ ಎಂಬ ಬಗ್ಗೆ ಶಾಸಕ ಸಿ.ಟಿ.ರವಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ವಿವಿದೆಡೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮ್ಯಾನ್‌ಹೋಲ್, ರಿಸೀವಿಂಗ್ ಚೇಂಬರ್‌ಗಳಲ್ಲಿ ಲೋಪವಿರುವುದು ಕಂಡು ಬಂದಿದೆ ಎಂದರು.
ನಗರಸಭೆ ಅಧ್ಯಕ್ಷೆ ಕವಿತಾಶೇಖರ್, ಉಪಾಧ್ಯಕ್ಷ ರವೀಂದ್ರ ಪ್ರಭು, ಮಾಜಿ ಶಾಸಕಿ ಎ.ವಿ.ಗಾಯತ್ರಿಶಾಂತೇಗೌಡ, ಸಿಡಿಎ ಅಧ್ಯಕ್ಷ ಸೈಯ್ಯದ್ ಹನೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಡಿ.ಎಲ್.ವಿಜಯ್‌ಕುಮಾರ್, ಜಿಲ್ಲಾಧಿಕಾರಿಜಿ.ಸತ್ಯವತಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಅಣ್ಣಾಮಲೈ, ನಗರಸಭೆ ಆಯುಕ್ತೆ ತುಷಾರಮಣಿ, ಒಳಚರಂಡಿ ಮಂಡಳಿಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.