ಚಾಮರಾಜನಗರ: ಸೋಂಕಿಗೆ ಒಳಗಾಗಿ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನೀಡಲಾಗುವ ಪ್ಲಾಸ್ಮಾ ಚಿಕಿತ್ಸೆ ಪ್ರಯೋಗವನ್ನು ಜಿಲ್ಲೆಯಲ್ಲೂ ಆರಂಭಿ ಸಿದ್ದು, ಇದುವರೆಗೆ ನಾಲ್ವರು ಚಿಕಿತ್ಸೆಗೆ ಒಳಗಾಗಿದ್ದು, ಇವರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ತಿಳಿಸಿದರು.
ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುಂ ಜಾಗ್ರತಾ ಕ್ರಮಗಳ ಸಂಬಂಧ ಜಿಲ್ಲಾಧಿಕಾರಿಯವರು ಸೋಮವಾರ ಫೇಸ್ ಬುಕ್ ಲೈವ್ ಮೂಲಕ ವಿವರ ನೀಡಿದರು. ಕೋವಿಡ್‌ನಿಂದ ಸಂಪೂರ್ಣವಾಗಿಗುಣಮುಖರಾಗಿರುವವರಿಂದ ಪ್ಲಾಸ್ಮಾ ಪಡೆದು ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತದೆ. ಇಂತಹ ಪ್ಲಾಸ್ಮಾ ಚಿಕಿತ್ಸೆ ಪ್ರಯೋಗ ಜಿಲ್ಲೆಯಲ್ಲೂ ಯಶಸ್ವಿಯಾಗುತ್ತಿದ್ದು, ನಾಲ್ವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.
ಸ್ವಯಂ ಪ್ರೇರಿತರಾಗಿ ಮುಂದೆ ಬನ್ನಿ: ಮಕ್ಕಳು, ಗರ್ಭಿಣಿಯರನ್ನು ಹೊರತು ಪಡಿಸಿ ನಿಗದಿತ ವಯಸ್ಸಿನ ಒಳಗಿರುವ ಗುಣಮುಖರಾದವರು ಪ್ಲಾಸ್ಮಾ ನೀಡಲು ಸ್ವಯಂ ಪ್ರೇರಿತರಾಗಿ ಮುಂದೆ ಬರಬೇಕು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಇದಕ್ಕಾಗಿ ಮಾಹಿತಿ ನೀಡಲಿದ್ದು, ವೈದ್ಯರಾದ ಡಾ. ಮಹೇಶ್ ಅವರನ್ನು ಮೊಬೈಲ್ ಸಂಖ್ಯೆ: 9449178896 ಸಂಪರ್ಕಿಸಬಹುದು. ಆಸ್ಪತ್ರೆಯ ಇತರೆ ತಜ್ಞ ವೈದ್ಯರನ್ನು ಭೇಟಿ ಮಾಡಿಯೂ ಪ್ಲಾಸ್ಮಾ ನೀಡಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲಾಡಳಿತ ಆಗಸ್ಟ್ ತಿಂಗಳಿನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಇದರ ಪರಿಣಾಮವಾಗಿ ಗುಣಮುಖರಾಗುವವವರ ಪ್ರಮಾಣ ಜಾಸ್ತಿಯಾಗಿದ್ದು, ಶೇ. 76.5ರಷ್ಟಿದೆ. ಈ ಹಿಂದೆ 14 ದಿನಗಳಿ ಗೊಮ್ಮೆ ದ್ವಿಗುಣಗೊಳ್ಳುತ್ತಿದ್ದ ಸೋಂಕಿನ ಪ್ರಮಾಣ ಈಗ 24 ದಿನಕ್ಕೆ ತಲುಪಿದೆ. ಪಾಸಿಟಿವಿಟಿ ಪ್ರಮಾಣ ಶೇ. 6.3ರಷ್ಟಿದೆ ಎಂದು ವಿಶ್ಲೇಷಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸೋಂಕಿತರ ಸಂಪರ್ಕಿರನ್ನು ಪತ್ತೆ ಹಚ್ಚುವಿಕೆ ಕಾರ್ಯವು ಗಣನೀಯವಾಗಿ ಹೆಚ್ಚಳವಾಗಿದೆ. 423 ಮಂದಿ ಪತ್ತೆ ಹಚ್ಚುವಿಕೆ ತಂಡದಲ್ಲಿ ಕಾರ್ಯ ನಿರ್ವಹಿಸತ್ತಿದ್ದಾರೆ. ತಜ್ಞ ವೈದ್ಯರು ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿ ಅತ್ಯಂತ ಶಿಸ್ತುಬದ್ಧವಾಗಿ ತೊಡಗಿಸಿ ಕೊಂಡು ಕೋವಿಡ್ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಸೂಕ್ತ ತೀರ್ಮಾನ: ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್‌ಗಳು ಲಭ್ಯವಿವೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಆಮ್ಲಜನಕ ಸಿಲಿಂಡರ್‌ಗಳ ಲಭ್ಯತೆ ಹಾಗೂ ಪೂರೈಕೆಗೆ ಸಂಬಂಧಿಸಿದಂತೆ ವೈದ್ಯಕೀಯ ತಜ್ಞರ ಸಮಿತಿ ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಹೋಂ ಐಸೋಲೇಷನ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಹೆಚ್ಚು ಸಂಖ್ಯೆಯ ಮಂದಿ ಈ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.