Advertisement

ಶೀಘ್ರ ರಸ್ತೆ ಕಾಮಗಾರಿ ಆರಂಭ

05:02 PM Nov 08, 2019 | Suhan S |

ರಾಮನಗರ: ತಾಲೂಕಿನ ಬಿಡದಿ ಹೋಬಳಿಯ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಇದೇ ನ.11ರ ಸೋಮವಾರದಿಂದ ಆರಂಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಅಧೀಕ್ಷಕ ದುರ್ಗಪ್ಪ ಭರವಸೆ ನೀಡಿದ್ದಾರೆ.

Advertisement

ಸೇತುವೆ ನಿರ್ಮಾಣ ಕಾಮಗಾರಿಗೆ 2019ರ ಮಾರ್ಚ್‌ನಲ್ಲಿ ಕಾರ್ಯಾದೇಶವಾಗಿದ್ದರೂ ಕಾಮಗಾರಿ ಆರಂಭವಾಗದ ಕಾರಣ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜ್‌ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಾದಿ ಹಿಡಿಯಲಿದ್ದ ಹಿನ್ನೆಲೆಯಲ್ಲಿ ನಗರದ ಲೋಕೋಪಯೋಗಿ ಇಲಾಖೆಗೆ ಖುದ್ದು ಭೇಟಿ ಕೊಟ್ಟು ಅಧಿಕಾರಿಗಳ ಬಳಿ ಚರ್ಚೆ ನಡೆಸಿದರು. ನಂತರ ಎಂಎಲ್‌ಸಿ ಸಿ.ಎಂ. ಲಿಂಗಪ್ಪ , ತಾಪಂ ಅಧ್ಯಕ್ಷರು ಮತ್ತು ಭದ್ರಯ್ಯ ಕಾಲೋನಿಯ ಗ್ರಾಮಸ್ಥರಿಗೆ ಸೋಮವಾರದಿಂದ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಇಇ ಜಯಗೋಪಾಲ್‌ ಉಪಸ್ಥಿತರಿದ್ದರು.

ಕಾಮಗಾರಿ ಏನು?: ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಪಂ ವ್ಯಾಪ್ತಿಗೆ ಸೇರಿದ ಗಾಣಕಲ್‌ ಗ್ರಾಮದಿಂದ ಮುತ್ತರಾಯನಗುಡಿ ಪಾಳ್ಯ ಸಂಪರ್ಕಿಸುವ ರಸ್ತೆ, ಬನ್ನಿಕುಪ್ಪೆ (ಬಿ) ಗ್ರಾಮದ ಶಾಲೆಯಿಂದ ಭದ್ರಯ್ಯ ಕಾಲೋನಿ ಮೂಲಕ ಮುತ್ತುರಾಯಗುಡಿಪಾಳ್ಯ ಸಂಪರ್ಕಿ ಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಕಳೆದ ಆಗಸ್ಟ್‌ ನಲ್ಲೇ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಗುತ್ತಿಗೆದಾರ ಕಾಮಗಾರಿ ಪೂರ್ಣ ಗೊಳಿಸು ವಲ್ಲಿ ವಿಫ‌ಲರಾಗಿದ್ದಾರೆ ಎಂಬುದು ಗ್ರಾಮಸ್ಥರ ದೂರಾಗಿತ್ತು.

ಕಾರ್ಯಾದೇಶವಾಗಿ 10 ತಿಂಗಳು ಕಳೆದರು ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು ಅವರು ಪದೇ ಪದೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಉಪಯೋಗವಾಗಿರಲಿಲ್ಲ. ಹೀಗಾಗಿ ಎಂಎಲ್‌ಸಿ ಸಿ.ಎಂ.ಲಿಂಗಪ್ಪ ಅವರ ಮೂಲಕ ಶಾಸಕ ಎ.ಮಂಜು ಅವರಿಗೆ ಮಾಹಿತಿ ತಲುಪಿಸಿ, ಇಲಾಖೆ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ನಗರಕ್ಕೆ ಭೇಟಿ ನೀಡಿದ್ದ ಸೂಪರಿಂಟೆಂಡೆಂಟ್‌ ದುರ್ಗಪ್ಪ, ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳೂವಂತೆ ಸೂಚನೆ ಕೊಟ್ಟಿದ್ದಾರೆ.

ಪ್ರತಿಭಟನೆ ಮುಂದೂಡಿಕೆ: ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿ ಆರಂಭಕ್ಕೆ ಕಾರ್ಯಾ ದೇಶವಾಗಿದ್ದರೂ, ಕಾಮಗಾರಿ ಆರಂಭವಾಗಿ ರಲಿಲ್ಲ. ಮಾಚ್‌ 8ರಂದು ಇಲಾಖೆ ಗುತ್ತಿಗೆದಾರ ರವಿಶಂಕರ್‌ ಎಂಬುವರೊಂದಿಗೆ ಒಪ್ಪಂದ ಮಾಡಿಕೊಂಡು ಗುತ್ತಿಗೆ ನೀಡಿದೆ. 5 ತಿಂಗಳ ಅವಧಿಯಲ್ಲಿ ಅಂದರೆ ಆಗಸ್ಟ್‌ನಲ್ಲೇ ಕಾಮಗಾರಿ ಪೂರ್ಣವಾಗಬೇಕಿತ್ತು. ಆದರೆ ಕಾಮಗಾರಿಯೇ ಆರಂಭವಾಗಿರಲಿಲ್ಲ. ಹೀಗಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದರು.

Advertisement

ಅಧಿಕಾರಿಗಳು ಗ್ರಾಮಸ್ಥರ ಒತ್ತಾಯಗಳನ್ನು ನಿರ್ಲಕ್ಷಿಸಿದ್ದರು ಎಂದು ಕಿಡಿಕಾರಿದರು. ಕಳೆದ ಲೋಕಸಭೆ ಚುನಾವಣೆ  ವೇಳೆಯೂ ಭದ್ರಯ್ಯ ಕಾಲೋನಿ ಮತದಾ ರರು ಮತದಾನ ಮಾಡುವು ದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅವರ ಮನವೊಲಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next