Advertisement

ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ: ಆರಗ ಜ್ಞಾನೇಂದ್ರ

02:41 PM Sep 22, 2022 | Team Udayavani |

ಬೆಂಗಳೂರು: ”ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆ ವಿನಹ, ಅಲ್ಪಸಂಖ್ಯಾತರು, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ ಅಲ್ಲ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಹೇಳಿದ್ದಾರೆ.

Advertisement

ಸುದ್ದಿಗಾರ ರೊಂದಿಗೆ ಮಾತನಾಡಿದ ಸಚಿವರು, ”ಸಮಾಜದಲ್ಲಿ, ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬಂದಿಯೊಂದಿಗೆ, ಎಲ್ಲರೂ ಸಹಕರಿಸಬೇಕು.ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದ ಸಚಿವರು, ಖಚಿತ ಮಾಹಿತಿ ಮೇರೆಗೆ ಎನ್ ಐಎ ಸಿಬಂದಿಗಳು, ಹಲವು ಕಡೆ ಶೋಧ ನಡೆಸಿದ್ದಾರೆ” ಎಂದರು.

ಇದನ್ನೂ ಓದಿ:ಹಿಜಾಬ್ ಪ್ರಕರಣ- 10 ದಿನಗಳ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

”ಶಿವಮೊಗ್ಗ ಪೊಲೀಸರು, ಇಬ್ಬರು ವ್ಯಕ್ತಿಗಳು ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯನ್ನು ಚುರುಕಿನಿಂದ ನಡೆಸಿರುವ ಶಿವಮೊಗ್ಗ, ಪೊಲೀಸರ, ಕಾರ್ಯ ಕ್ಷಮತೆಯ ಬಗ್ಗೆ, ಅಭಿನಂದಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕರು ನಡೆಸುತ್ತಿರುವ ”ಪೇ ಸಿಎಂ” ಅಭಿಯಾನದ ಕುರಿತು ಪ್ರತಿಕ್ರಿಯಿಸಿ, ”ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು ಬಣ್ಣ ಬಯಲು ಮಾಡಿದೆ” ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next