Advertisement

ಸಮಾಜಮುಖೀ ಕಾರ್ಯದಿಂದ ಸತ್ಪ್ರಜೆಗಳಾಗಿ

12:37 PM Feb 10, 2018 | Team Udayavani |

ಮೂಗೂರು(ತಿ.ನರಸೀಪುರ): ಸಮಾಜಮುಖೀ ಕಾರ್ಯಗಳ ಮುಖಾಂತರ ವಿದ್ಯಾರ್ಥಿಗಳು ಸತ್ಪ್ರಜೆಯಾಗಿ ರೂಪುಗೊಳ್ಳಬೇಕೆಂದು ಮೂಗೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್‌.ಮೋಹನ್‌ ಕುಮಾರ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Advertisement

ಮೂಗೂರು ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಮನೋಭಾವವನ್ನು ಬೆಳೆಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವ ಮೂಲಕ ಅಭಿವೃದ್ಧಿ ಹೊಂದಬೇಕು.

ತಮ್ಮ ಕಾಲೇಜು ದಿನಗಳಲ್ಲಿ ಶಿಸ್ತು, ಸಂಯಮವನ್ನು ಮೈಗೂಡಿಸಿಕೊಡು ಆಸಕ್ತಿ ಇರುವ ಕಾರ್ಯಗಳಲ್ಲಿ ಗೆಲುವು ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಮ್ಮ ಕಾಲೇಜಿನ ಅಭಿವೃದ್ಧಿಗೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು ಸಹಕಾರ ನೀಡಿದ್ದನ್ನು ಇದೇ ವೇಳೆ ಅವರು ಸ್ಮರಿಸಿದರು.

ಸದ್ಗುಣ ಬೆಳೆಸಿಕೊಳ್ಳಿ: ನಿವೃತ್ತ ಉಪನ್ಯಾಸಕ ಉದಯ್‌ಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳು ಪರಿಪೂರ್ಣರಾಗಬೇಕಾದಲ್ಲಿ ತಮ್ಮ ವ್ಯಕ್ತಿತ್ವದ ಗಟ್ಟಿತನವನ್ನು ಮೈಗೂಡಿಸಿಕೊಂಡು ನೈತಿಕತೆಯ ಮೂಲಕ ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು. ಸದ್ಗುಣ ಬೆಳಿಸಿಕೊಳ್ಳುವ ಮೂಲಕ ಸಾರ್ವಜನಿಕ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತರರ ಅಭಿವೃದ್ಧಿಗೆ ಸಹಕರಿಸುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ವರ್ಗಾವಣೆಗೊಂಡ ಕಾಲೇಜಿನ ಪ್ರಾಂಶುಪಾಲ ಎನ್‌.ಮೋಹನ್‌ ಕುಮಾರ್‌ ಅವರಿಗೆ ಕಾಲೇಜು, ಫೌಡಶಾಲೆಯ ಶಿಕ್ಷಕ ವೃಂದದಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ಕಾಲೇಜು ವಿದ್ಯಾರ್ಥಿನಿಯರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ರಂಜಿಸಿತು.

Advertisement

ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ನಾಗಸ್ವಾಮಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಪಿ.ಮರಿಸ್ವಾಮಿ, ಉಪಾಧ್ಯಕ್ಷ ಎಂ.ಎಂ.ಬಸವಣ್ಣ, ಉಪ ಪ್ರಾಂಶುಪಾಲ ಜಗದೀಶ್‌ಮೂರ್ತಿ, ರಾಜು ಜೋಷಿ, ಉಪನ್ಯಾಸಕರಾದ ರಾಜೇಶ್‌, ನಾಗಮಲ್ಲಪ್ಪ, ಲಕ್ಷ್ಮೀ, ಮಮತಾ, ಪುರುಷೋತ್ತಮ್‌, ಕವಿತಾ, ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next