ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರನ್ನು ಕೋವಿಡ್ 19 ಸೋಂಕು ಬೆಂಬಿಡದೆ ಕಾಡುತ್ತಿದೆ. ಕೋವಿಡ್ 19 ಎರಡನೇ ಅಲೆಯಲ್ಲಿ 49 ಶಿಕ್ಷಕರು ಸಾವಿಗೀಡಾಗಿದ್ದಾರೆ.
ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 20 ಮಂದಿ ಶಿಕ್ಷಕರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ 10 ಜನ ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕರ್ತವ್ಯದಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೋವಿಡ್ ಮೊದಲನೇ ಅಲೆಯಲ್ಲಿ 23 ಹಾಗೂ ಎರಡನೇ ಅಲೆಯಲ್ಲಿ 20 ಮಂದಿ, ಜತೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 18 ಹಾಗೂ 29 ಶಿಕ್ಷಕರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 90 ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ಬೆಳಗಾವಿ ಡಿಡಿಪಿಐ ಎ.ಬಿ. ಪುಂಡಲೀಕ ಹಾಗೂ ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ತಿಳಿಸಿದರು.
ಇದನ್ನೂ ಓದಿ:ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ : ಆಯನೂರು ಮಂಜುನಾಥ್
ಸದ್ಯ 53 ಮಂದಿ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ ಕೆಲವರು ಆಸ್ಪತ್ರೆಯಲ್ಲಿದ್ದಾರೆ. ಇನ್ನೂ ಕೆಲವರು ಹೋಂ ಐಸೊಲೇಷನ್ ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು