Advertisement

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

06:06 PM Sep 27, 2023 | Team Udayavani |

ಬೆಳಗಾವಿ: ಕಳೆದ ವರ್ಷ ಸರಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

Advertisement

ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಉತ್ಸವಕ್ಕೆ ಐದು ಕೋಟಿ ರೂ. ಅನುದಾನ ಕೋರಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್‌ ಪಾಟೀಲ ಅವರು ಈಗಾಗಲೇ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಿದ್ದಾರೆ ಎಂದರು.

ಈ ಬಾರಿ ಕಿತ್ತೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೇದಿಕೆ ನಿರ್ಮಾಣ ಮಾಡುವುದರ ಜೊತೆಗೆ ಕಾಕತಿ ಗ್ರಾಮದಲ್ಲಿ ಸಹ ಮುಖ್ಯ ವೇದಿಕೆ ನಿರ್ಮಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಪ್ರತಿವರ್ಷದಂತೆ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಲು ಅನುಕೂಲವಾಗುವಂತೆ ವೇದಿಕೆ, ಮೆರವಣಿಗೆ, ಊಟೋಪಾಹಾರ, ವಸ್ತುಪ್ರದರ್ಶನ ಸೇರಿದಂತೆ ಹೀಗೆ ಎಲ್ಲ ಉಪ ಸಮಿತಿಗಳನ್ನು ರಚಿಸಲಾಗುವುದು. ಸಮಿತಿ ರಚನೆಯಾದ ಕೂಡಲೇ ಸದಸ್ಯರು ಕಾರ್ಯ ಆರಂಭಿಸಬೇಕು ಎಂದು ಸೂಚನೆ ನೀಡಿದರು. ಕಿತ್ತೂರು ಉತ್ಸವದ ಪೂರ್ವಸಿದ್ಧತೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಪ್ರತಿವರ್ಷದಂತೆ ಕಿತ್ತೂರಿನಲ್ಲಿ ಅ.3 ರಂದು ಸಂಜೆ 4 ಗಂಟೆಗೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಮತ್ತೊಂದು ಸಭೆಯನ್ನು ಕರೆದು ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಸರಕಾರದಿಂದ ಉತ್ಸವಕ್ಕೆ ಐದು ಕೋಟಿ ರೂಪಾಯಿ ಅನುದಾನ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಆದ್ದರಿಂದ ಕಳೆದ ಬಾರಿಯ ವೆಚ್ಚದ ಆಧಾರದ ಮೇಲೆ ಮುಂಚಿತವಾಗಿಯೇ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು, ಕಿತ್ತೂರು ಉತ್ಸವದ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಬೆ„ಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next