ಚಿಕ್ಕೋಡಿ: ಕೊರೊನಾ ಎರಡನೆ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಸರ್ಕಾರದ ಕೋವಿಡ್ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಯಾವುದೇ ತೊಂದರೆಯಾಗಬಾರದು.
ಈ ನಿಟ್ಟಿನಲ್ಲಿ ಅಧಿ ಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಕೊರೊನಾ ತಡೆಗಟ್ಟುವ ಕುರಿತು ತಾಲೂಕಿನಲ್ಲಿ ಕೈಗೊಂಡ ಮುಂಜಾಗ್ರತೆ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತಾಲೂಕಿನಲ್ಲಿ ಕೊರೊನಾ ಸೋಂಕಿತರಿಗೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾಯ್ದಿರಿಸಲಾದ ಬೆಡ್‌ಗಳು, ಆಕ್ಸಿಜನ್, ವೆಂಟಿಲೇಟರ್ ಮತ್ತು ರೆಮ್‌ಡಿಸಿವಿಯರ್ ಲಸಿಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ತಾಲೂಕಿನಲ್ಲಿ ಸೋಂಕಿತರಿಗೆ ಯಾವುದೇ ರೀತಿಯ ಅನಾನೂಕೂಲ ಆಗಬಾರದು.
18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯುವಂತೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಬೇಕು ಎಂದರು.
ತಾಲೂಕಿನಲ್ಲಿ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು. ಈ ವೇಳೆ ಉಪವಿಭಾಗಾಧಿ ಕಾರಿ ಯುಕೇಶಕುಮಾರ, ತಹಶೀಲ್ದಾರ್ ಪ್ರವೀಣ ಜೈನ್, ಡಿವೈಎಸ್‌ಪಿ ಮನೋಜ ನಾಯಿಕ, ಸಿಪಿಐ ಆರ್.ಆರ್ ಪಾಟೀಲ, ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಸ್.ಎಸ್.ಗಡಾದ, ತಾಲೂಕಾ ಆರೋಗ್ಯಾಧಿಕಾರಿ ಡಾ| ವಿಠuಲ ಶಿಂಧೆ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ ಮುಂತಾದವರು ಇದ್ದರು.