Advertisement

ಬೆಳಗಾವಿ : ಲಂಚ‌ ಪಡೆಯುತ್ತಿದ್ದ ಬೆಳಗಾವಿಯ ಕೃಷಿ ಅಧಿಕಾರಿ ಎಸಿಬಿ ಬಲೆಗೆ

10:23 PM Jun 22, 2022 | Team Udayavani |

ಬೆಳಗಾವಿ : ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಲಂಚ 20 ಸಾವಿರ ರೂ.‌ಲಂಚ‌ ಪಡೆಯುತ್ತಿದ್ದ ಕೃಷಿ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಲೆಗೆ ಬಿದ್ದಿದ್ದಾರೆ.

Advertisement

ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ ಫಕೀರೇಶ ಅಗಡಿ ಎಸಿಬಿ ಬಲೆಗೆ ಬಿದ್ದಿದ್ದು, ಕಚೇರಿಯಲ್ಲಿ 44 ಸಾವಿರ ರೂ.‌ಹಾಗೂ ಮನೆಯಲ್ಲಿ ಶೋಧ ನಡೆಸಿದಾಗ 3.54 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.

ಅನಗೋಳದ ಮೋನೇಶ್ವರ ಕಮ್ಮಾರ ಎಂಬವರು ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ಪಡೆಯಲು ಆನ್ ಲೈನ್ ನಲ್ಲಿ ಅರ್ಜಿ‌ ಸಲ್ಲಿಸಿದ್ದರು. ಇದನ್ನು ಅಪ್‌ಲೋಡ್ ಮಾಡಲು ಕೃಷಿ ಅಧಿಕಾರಿ ಅಗಡಿ 30 ಸಾವಿರ ರೂ. ಲಂಚ ಕೇಳಿದ್ದರು. ಮುಂಗಡವಾಗಿ 20 ಸಾವಿರ ರೂ.‌ಲಂಚ‌ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಎಸ್ ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಡಿಎಸ್ ಪಿ ಜೆ.ಎಂ. ಕರುಣಾಕರ‌ ಶೆಟ್ಟಿ, ಇನ್ಸಪೆಕ್ಟರ್ ಗಳಾದ ಎ.ಎಸ್. ಗೂದಿಗೊಪ್ಪ, ನಿರಂಜನ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.

ಇದನ್ನೂ ಓದಿ : ಕೊಪ್ಪಲಂಗಡಿ : ಲಾರಿ ಢಿಕ್ಕಿ ; ಡಿವೈಡರ್‌ ಮೇಲೆ ಪಲ್ಟಿಯಾದ ಆಮ್ನಿ, ಪ್ರಯಾಣಿಕರು ಪಾರು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next