Advertisement
ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಐಸಿಸಿ ಅಧಿವೇಶನದ ದಿನವೇ ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು. ಗೋಲ್ವಾಲ್ಕರ್, ಹೆಡಗೆವಾರ್, ಸಾವರ್ಕರ್ ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆ ಇಲ್ಲದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿದ್ದಾರೆ. ವಿಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ, ಸರಕಾರದ ತಪ್ಪು-ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಹೀಗಿರುವಾಗ ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.