Advertisement

Protest: ವಿದ್ಯುತ್ ದರ ಹೆಚ್ಚಳ ಖಂಡಿಸಿ ಬೆಳಗಾವಿ ಬಂದ್

03:16 PM Jun 22, 2023 | Team Udayavani |

ಬೆಳಗಾವಿ: ವಿದ್ಯುತ್ ದರ ಹೆಚ್ಚಳ ಖಂಡಿಸಿ ವಿವಿಧ ಕೈಗಾರಿಕೆಗಳು ಸಂಘಟನೆಗಳು ಜಿಲ್ಲೆಯಲ್ಲಿ ಗುರುವಾರ ಬಂದ್ ಆಚರಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

Advertisement

ಬೆಳಗಾವಿ ಧರ್ಮವೀರ ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬೆಳಗಾವಿ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿದರು.

ಎಲೆಕ್ಟ್ರಿಕ್ ಬೈಕ್ ನ ಶವಯಾತ್ರೆ ಮಾಡಿದ ಉದ್ಯಮಿಗಳು ಮತ್ತು ಕಾರ್ಮಿಕರು ಹೆಚ್ಚಿನ ದರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೈಗಾರಿಕೆಗಳನ್ನು ಮುಚ್ಚುವ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.

ನೆರೆಯ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕೈಗಾರಿಕೆಗಳಿಗೆ ಉತ್ತಮ ಸೌಲಭ್ಯಗಳಿವೆ. ಆದರೆ ಕರ್ನಾಟಕದಲ್ಲಿ ಕೈಗಾರಿಕಾ ವಿರೋಧಿ ನೀತಿ ಅನುಸರಿಸಲಾಗುತ್ತದೆ. ಉದ್ಯಮದ ಉಳಿವಿಗೆ ನಾವು ಅನಿವಾರ್ಯವಾಗಿ ಗೋವಾ ಇಲ್ಲವೇ ಮಹಾರಾಷ್ಟ್ರಕ್ಕೆ ಹೋಗುವ ಪರಿಸ್ಥಿತಿ ಬರುತ್ತದೆ. ಅದಕ್ಕೆ ಅವಕಾಶ ಕೊಡಬಾರದು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next