Advertisement

ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ

12:05 PM Jan 18, 2021 | Team Udayavani |

ಬೆಂಗಳೂರು: ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ರಾಜಕೀಯ ನಾಯಕರು ತಿರುಗೇಟು ನೀಡುತ್ತಿದ್ದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

‘ಬೆಳಗಾವಿ ನಮ್ಮದು’ ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ ಎಂದಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಮಹಾ ಸಿಎಂ ರನ್ನು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ  ಪ್ರತ್ಯುತ್ತರ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

Advertisement

Udayavani is now on Telegram. Click here to join our channel and stay updated with the latest news.

Next