Advertisement
ಬೆಳಗಾವಿ ನಗರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಎಲ್‌ಇ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
Related Articles
Advertisement
ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುವುದು ಪತ್ತೆ ಹಚ್ಚಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.