Advertisement
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಕೆಲ ಬಿಜೆಪಿ ನಾಯಕರೇ ಇದನ್ನು ಹೇಳಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಮುಂದೆ ತಮ್ಮ ತಪ್ಪಿನ ಅರಿವಾಗಲಿದೆ. ಈ ಪ್ರಕರಣದ ನಂತರ ಸಿದ್ದರಾಮಯ್ಯ ಮತ್ತಷ್ಟು ಬಲಶಾಲಿಯಾಗಿ ಹೊರಹೊಮ್ಮಲಿದ್ದಾರೆ ಎಂದರು.
Related Articles
Advertisement
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಾಥಮಿಕ ಹಂತರ ವಿಚಾರಣೆ ಮುಗಿದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿಲ್ಲ. ಈ ನಾಯಕರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿ ತನಿಖೆ ಪೂರ್ಣಗೊಂಡಿದೆ. ಆದರೂ ಪ್ರಾಸಿಕ್ಯೂಷನ್ ಗೆ ಕ್ರಮವಹಿಸಿಲ್ಲ. ಆದರೆ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ವಿಚಾರಣೆಯೂ ಆಗಿಲ್ಲ. ಆದರೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಎಂ.ಬಿ ಪಾಟೀಲ ಹೇಳಿದರು.
ಇದನ್ನು ವಿರೋಧಿಸಿ ನಾಳೆ ಶನಿವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಂತರ ಕುಮಾರಸ್ವಾಮಿ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಲಾಗುವದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.