Advertisement

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

05:39 PM Dec 07, 2022 | Team Udayavani |

ನವದೆಹಲಿ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

Advertisement

ಲೋಕಸಭೆಯಲ್ಲಿ ಮಾತನಾಡಿದ ಅವರು ಕಳೆದ ಹತ್ತು ದಿನಗಳಿಂದ ಮಹಾರಾಷ್ಟ್ರದಲ್ಲಿ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಮಹಾರಾಷ್ಟ್ರದ ನೆರೆ ರಾಜ್ಯ ಕರ್ನಾಟಕದ ಮುಖ್ಯಮಂತ್ರಿ ಮಹಾರಾಷ್ಟ್ರದ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಮಂಗಳವಾರ ಗಡಿ ದಾಟಿ, ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ನಮ್ಮ ಜನ ಕರ್ನಾಟಕಕ್ಕೆ ಹೋಗಲು ಯತ್ನಿಸುತ್ತಿದ್ದರು. ಆದರೆ ಅವರನ್ನು ಥಳಿಸಲಾಯಿತು. ಕಳೆದ ಹತ್ತು ದಿನಗಳಿಂದ ಮಹಾರಾಷ್ಟ್ರದ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ನಮ್ಮದು ಒಂದು ದೇಶ ಮತ್ತು ಈ ದೇಶದಲ್ಲಿ ಈ ರೀತಿಯ ಘಟನೆ ನಡೆಯಬಾರದು. ಈ ಬಗ್ಗೆ ಮಧ್ಯಸ್ಥಿಕ್ಕೆ ವಹಿಸುವಂತೆ ಅಮಿತ್‌ ಶಾ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಸುಪ್ರಿಯಾ ಸುಳೆ ಹೇಳಿದ್ದಾರೆ.

ಫಡ್ನವೀಸ್- ಅಮಿತ್ ಶಾ ಸಮಾಲೋಚನೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಈ ವಿಷಯದ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ.

Advertisement

“ನಾನೇ ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಶರದ್ ಪವಾರ್ ಅವರು ಕರ್ನಾಟಕಕ್ಕೆ ಹೋಗುವ ಅಗತ್ಯವಿಲ್ಲ. ಈ ವಿವಾದದ ಬಗ್ಗೆ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಮತ್ತು ಅವರು ಶೀಘ್ರದಲ್ಲೇ ಈ ವಿಷಯವನ್ನು ಪರಿಶೀಲಿಸುತ್ತಾರೆ” ಎಂದು ಫಡ್ನವೀಸ್ ಹೇಳಿದರು.

ಮಹಾರಾಷ್ಟ್ರ ಮತ್ತು ಕರ್ನಾಟಕದ ಜನರು ಶಾಂತಿಯನ್ನು ಕಾಪಾಡಬೇಕು ಮತ್ತು ಕಾನೂನು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದರು.

ಗಡಿ ವಿವಾದದ ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ, ಆದ್ದರಿಂದ ಜನರು ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next