ಬೆಳಗಾವಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಹೀಗಾಗಿ ನಗರ ಹಾಗೂ ಜಿಲ್ಲೆಯಾದ್ಯಂತ ಎಲ್ಲ ಬಸ್ ಸಂಚಾರ ಸ್ಥಗಿತಗೊಂಡಿವೆ.
ಕ.ರಾ.ರ.ಸಾ ಸಂಸ್ಥೆಯ ನಾಲ್ಕು ನಿಗಮಗಳ ಸುಮಾರು 1.30 ಲಕ್ಷ ಸಿಬ್ಬಂದಿಗಳನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಹಲವಾರು ಪ್ರತಿಭಟನೆ ನಡೆಸಿದರೂ ಸಾಕಾರಗೊಂಡಿಲ್ಲ. ಹೀಗಾಗಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರಿಗೆ ಸಂಸ್ಥೆಯಲ್ಲಿ ಒಟ್ಟು 1.30 ಲಕ್ಷ ಕಾರ್ಮಿಕರನ್ನು ಒಳಗೊಂಡ ದೇಶ,ವಿದೇಶಗಳ ಅತ್ಯುನ್ನತ ಸಾರಿಗೆ ಪ್ರಶಸ್ತಿಗಳಿಗೆ ಪಾತ್ರರಾಗಿರುವ ಸಂಸ್ಥೆಯ ಕಾರ್ಮಿಕರ ಜೀವನ ಹೀನಾಯ ಸ್ಥಿತಿಗೆ ತಲುಪಿದೆ. ಹಗಲು ರಾತ್ರಿ ವಿಶ್ರಾಂತಿ ಇಲ್ಲದೆ ಶೇ. 40 ರಷ್ಟು ಕಡಿಮೆ ಸಂಬಳದೊಂದಿಗೆ ದುಡಿಯುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರಿಸಬೇಕೆಂದು ಹಲವಾರು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ರಾಜಸ್ಥಾನ್ ಸರ್ಕಾರಿ ಆಸ್ಪತ್ರೆ: ಒಂದೇ ಗಂಟೆಯಲ್ಲಿ ಒಂಬತ್ತು ನವಜಾತ ಶಿಶುಗಳ ಸಾವು