Advertisement

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

12:21 PM Dec 26, 2024 | Team Udayavani |

ಬೆಳಗಾವಿ: 1924 ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿ ನಗರದ ವೀರಸೌಧದಲ್ಲಿ ಗುರುವಾರ (ಡಿ.26) ಗಾಂಧೀಜಿಯವರ ಪುತ್ಥಳಿ ಅನಾವರಣ ಮಾಡಲಾಯಿತು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ನವೀಕೃತ ಫೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆ ಮಾಡಿದರು.

ಗಂಗಾಧರರಾವ ದೇಶಪಾಂಡೆ ಸ್ಮಾರಕ ಭವನ ಉದ್ಘಾಟನೆ

ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗದಲ್ಲಿ 1.58 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.

Advertisement

ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಕೆ ಪಾಟೀಲ, ಸತೀಶ ಜಾರಕಿಹೊಳಿ, ಭೈರತಿ ಸುರೇಶ್, ಶಿವರಾಜ ತಂಗಡಗಿ,  ದಿನೇಶ ಗುಂಡೂರಾವ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕರಾದ ಆಸೀಫ್(ರಾಜು)ಸೇಠ, ಗಣೇಶ್ ಹುಕ್ಕೇರಿ, ಪ್ರಕಾಶ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ‌‌ ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರು, ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next