ಬೆಳಗಾವಿ: ಎರಡೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ ಜೀವ ಇರುವವರೆಗೂ ಕಠಿಣ ಶಿಕ್ಷೆ ಮತ್ತು 30 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
ಬೈಲಹೊಂಗಲ ತಾಲ್ಲೂಕಿನ ವಣ್ಣೂರಿನ ಸುಭಾಷ ಮಹಾದೇವ ನಾಯ್ಕ ಶಿಕ್ಷೆಗೆ ಒಳಗಾದ ಆರೋಪಿ.
2017ರಲ್ಲಿ ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಶಾಲೆ ಕಂಪೌಂಡ್ ಹತ್ತಿರ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಕುತ್ತಿಗೆ ಹಿಚುಕಿ, ಮಣ್ಣಿನಲ್ಲಿ ಹೂತುಹಾಕಿ ಕೊಲೆ ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದ.
ಈ ಸಂಬಂಧ ಬಾಲಕಿ ಪೋಷಕರು ನೇಸರಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಎಚ್.ಸಂಗನಗೌಡರ ಅವರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ಪರಿಹಾರ ಪಡೆಯುವಂತೆ ಸಂತ್ರಸ್ತೆಗೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
ಇದನ್ನೂ ಓದಿ: Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್