ಬೆಳಗಾವಿ: ಧರ್ಮ ಹಾಗೂ ಭಾಷೆ ಮಧ್ಯೆ ಪ್ರಚೋದನಕಾರಿ ವಾಟ್ಸಾಪ್ ಸಂದೇಶಗಳನ್ನು ಹರಿಬಿಟ್ಟ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಾಕಿ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಮಾರ್ಕೆಟ್ ಠಾಣೆಯಲ್ಲಿ ಇಬ್ಬರು ಹಾಗೂ ಗ್ರಾಮೀಣ ಠಾಣೆಯಲ್ಲಿ ಒಬ್ಬನ ವಿರುದ್ಧ ದೂರು ದಾಖಲಾಗಿದೆ.
ಕಾನೂನು ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್‌ಬುಕ್, ಟ್ವಿಟರ್‌ಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಬಾರದು, ಪ್ರಚೋದನಕಾರಿ ಸಂದೇಶಗಳನ್ನು ಭಿತ್ತರಿಸಿದರೆ ಹಾಗೂ ಬಂದ ಸಂದೇಶಗಳನ್ನು ಬೇರೆಯವರಿಗೆ ರವಾನಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟು ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಧರ್ಮ ಮತ್ತು ಭಾಷಿಕರ ಮಧ್ಯೆ ಜಗಳ ಹಚ್ಚುವ ಕೆಲಸ ಮಯಾರೂ ಮಾಡಬಾರದು. ಬೆಳಗಾವಿ ನಗರದ ಜನರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಮಕಾನೂನು ಸುವ್ಯವಸ್ಥೆಗೆ ಭಂಗವಾಗುವ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ತಿಳಿಸಿದ್ದಾರೆ.
ಇದನ್ನೂ ಓದಿ : ತನ್ನ ರಕ್ತದಿಂದ ನೂರಾರು ಸಾಧಕರ ಚಿತ್ರಕಲೆ ಬಿಡಿಸುವ ಡಾ.ಸಂಗಮೇಶ ಬಗಲಿ