ಬೆಳಗಾವಿ: ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿಯಿರುವ ಬಿಲ್ಲನ್ನು ಬಡ್ಡಿ ಸಮೇತ ಪಾವತಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.
ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಸಮನ್ವಯ ಸಭೆ ನಡೆಸಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಒಟ್ಟು 28 ಸಕ್ಕರೆ ಕಾರ್ಖಾನೆಗಳಿದ್ದು, ಅದರಲ್ಲಿ 3 ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಬಾಕಿ ಉಳಿಸಿಕೊಂಡಿವೆ.
ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಜೂ.25 ರೊಳಗಾಗಿ ಕಾನೂನು ಪ್ರಕಾರ ಶೇ.15 ರಷ್ಟು ಬಡ್ಡಿ ಸಮೇತ ಬಾಕಿ ಮೊತ್ತವನ್ನು ಪಾವತಿಸಬೇಕು. ಒಂದು ವೇಳೆ ನಿಗದಿತ ಗಡುವಿನೊಳಗಾಗಿ ಬಾಕಿ ಪಾವತಿಸದೇ ಹೋದರೆ ಅಂತಹ ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜೂ.25 ರೊಳಗಾಗಿ ಬಾಕಿ ಮೊತ್ತವನ್ನು ಬಡ್ಡಿ ಸಮೇತ ಪಾವತಿಸಲಾಗುವುದು ಎಂದು ಸಕ್ಕರೆ ಕಾರ್ಖಾನೆಗಳು ಮುಚ್ಚಳಿಕೆ ಪತ್ರ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳಿಂದ ಬರಬೇಕಾದ ಮೊತ್ತದ ಜೊತೆಗೆ ಶೇ.15 ರಷ್ಟು ಬಡ್ಡಿ ಸಮೇತ ಲೆಕ್ಕ ಹಾಕಿ ವರದಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ