Advertisement
18 ನಗರಗಳನ್ನು ಸ್ಮಾರ್ಟ್‌ಸಿಟಿ-2 ಯೋಜನೆಗೆ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಗ್ಗೆ ಇತ್ತೀಚೆಗೆ ದೆಹಲಿಯಲ್ಲಿ ದೇಶದ 100 ಸ್ಮಾರ್ಟ್ ಸಿಟಿಯ ಅಧಿಕಾರಿಗಳ ಕಾರ್ಯಾಗಾರ ನಡೆಯಿತು. ದೇಶದ 18 ನಗರಗಳನ್ನು ಆಯ್ಕೆ ಮಾಡಿದ ಬಳಿಕ ಪ್ರತಿ ನಗರಕ್ಕೆ ತಲಾ 135 ಕೋಟಿ ರೂ. ಅನುದಾನ ಸಿಗಲಿದೆ. ಈ ಅನುದಾನದಲ್ಲಿ ಶೇ. 80ರಷ್ಟನ್ನು ಘನ ತ್ಯಾಜ್ಯ ನಿರ್ವಹಣೆಗೆ ಬಳಸಿಕೊಳ್ಳಬೇಕೆಂಬ ನಿಯಮವಿದೆ.
ಸರ್ಕಾರ, ಶೇ. 40ರಷ್ಟು ರಾಜ್ಯ ಸರ್ಕಾರ ಹಾಗೂ ಶೇ. 20ರಷ್ಟು ಮಹಾನಗರ ಪಾಲಿಕೆ ಅನುದಾನ ನೀಡಬೇಕಾಗಿದೆ.
Related Articles
Advertisement
ಕೇಂದ್ರ ಸರ್ಕಾರದ ಸ್ಮಾರ್ಟ್‌ಸಿಟಿ ಯೋಜನೆಗಾಗಿ ದೇಶದ 100 ನಗರಗಳನ್ನು ಆಯ್ಕೆ ಮಾಡಿದ್ದು, ಮೊದಲ ಹಂತದಲ್ಲಿಯೇ 2016ರಲ್ಲಿ ಬೆಳಗಾವಿ ನಗರ ಆಯ್ಕೆ ಆಗಿತ್ತು. ಬೆಳಗಾವಿಗಾಗಿ ಒಂದು ಸಾವಿರ ಕೋಟಿ ರೂ, ಅನುದಾನವೂ ಬಿಡುಗಡೆ ಆಗಿತ್ತು. 2016 ಜೂನ್ 25ರಂದು ಸ್ಮಾರ್ಟ್‌ಸಿಟಿ ಯೋಜನೆಗೆ ಚಾಲನೆಯೂ ಸಿಕ್ಕಿತ್ತು. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಎಂದರೆ 2021 ಜೂನ್‌ವರೆಗೆ ಎಲ್ಲ ಕಾಮಗಾರಿಗಳು ಮುಕ್ತಾಯಗೊಂಡು ಸ್ಮಾರ್ಟ್‌ಸಿಟಿ ಆಗಬೇಕಿತ್ತು.
ಎರಡು ವರ್ಷ ಕೊರೊನಾ ವೇಳೆ ಕಾಮಗಾರಿ ಸ್ಥಗಿತಗೊಂಡು ಇನ್ನೂ ಹಲವು ಕಾಮಗಾರಿಗಳು ಬಾಕಿ ಉಳಿದಿವೆ. ಇದಕ್ಕಾಗಿ ಎಲ್ಲ ಕೆಲಸ ಪೂರ್ಣಗೊಳಿಸಲು 2024 ಜೂನ್‌ವರೆಗೆ ಹೊಸ ಡೆಡ್‌ಲೈನ್ ನೀಡಲಾಗಿದೆ. ಇವು ಪೂರ್ತಿ ಆಗುವುದಕ್ಕಿಂತ ಮುಂಚೆಯೇ ಸ್ಮಾರ್ಟ್ ಸಿಟಿ-2 ಯೋಜನೆ ಆರಂಭವಾಗುತ್ತಿದೆ.
ಬೆಳಗಾವಿಯ ಪ್ರಸ್ತಾವನೆ ಏನು?ಸ್ಮಾರ್ಟ್‌ಸಿಟಿ-2 ಯೋಜನೆಗೆ ಆಯ್ಕೆ ಆಗಬೇಕಾದರೆ ಘನ ತ್ಯಾಜ್ಯ ನಿರ್ವಹಣೆಗೆ ಮೊದಲ ಆದ್ಯತೆ ನೀಡಬೇಕಿದೆ. ಬೆಳಗಾವಿ
ನಗರದಲ್ಲಿ ನಿತ್ಯ 250 ಟನ್‌ಗೂ ಹೆಚ್ಚು ಹಸಿ ಮತ್ತು ಒಣ ಕಸ ಸಂಗ್ರಹವಾಗುತ್ತಿದೆ. ಈ ಕಸದ ಬಳಕೆ ಮಾಡಿಕೊಂಡು ವಿದ್ಯುತ್
ಅಥವಾ ಗ್ಯಾಸ್ ತಯಾರಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗೆ ಯಾವ ಪ್ರಸ್ತಾವನೆ ಕಳುಹಿಸಲಿದೆ ಎಂಬುದು ಮುಖ್ಯವಾಗಿದೆ. ಒಂದು ವೇಳೆ ಬೆಳಗಾವಿ ನಗರ 18 ನಗರಗಳಲ್ಲಿ ಆಯ್ಕೆಯಾದರೆ 135 ಕೋಟಿ ರೂ, ಅನುದಾನದಲ್ಲಿ ಘನ ತ್ಯಾಜ್ಯ ನಿರ್ವಹಣೆ ಆಗಲಿದೆ. ಇದರಿಂದ ಬೆಳಗಾವಿಯಲ್ಲಿಯ
ಕಸದ ಸಮಸ್ಯೆ ತಲೆ ನೋವು ಕಡಿಮೆ ಆಗಲಿದೆ ಎಂಬುದು ಸಾರ್ವಜನಿಕರ ಅಭಿಮತ. ಸ್ಮಾರ್ಟ್‌ಸಿಟಿ-2 ಯೋಜನೆಗೆ ದೇಶದ 100 ನಗರಗಳ ಪೈಕಿ 18 ನಗರಗಳನ್ನು ಆಯ್ಕೆ ಮಾಡಲು ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಈ ನಿಟ್ಟಿನಲ್ಲಿ ಬೆಳಗಾವಿಯೂ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ವಿನೂತನ ಕಾರ್ಯ ನಡೆಸುವ ಪ್ರಸ್ತಾವನೆ ಕಳುಹಿಸಲಿದೆ. ಈ ಬಗ್ಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಂಡು 2024ರ ಜನೇವರಿ 15ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
*ಹನುಮಂತ ಕಲಾದಗಿ,
ಎಇಇ, ಮಹಾನಗರ ಪಾಲಿಕೆ ಭೈರೋಬಾ ಕಾಂಬಳೆ